ರಾಜ್ಯೋತ್ಸವ ಆಚರಣೆ: ಮೆರವಣಿಗೆ ನಡೆಸುವಂತಿಲ್ಲ: ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ

ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವ ಆಚರಣೆ ಸಂದರ್ಭದಲ್ಲಿ 100 ಜನಕ್ಕಿಂತ ಹೆಚ್ಚು ಸೇರುವಂತಿಲ್ಲ ಹಾಗೂ ಯಾವುದೇ ಮೆರವಣಿಗೆ ನಡೆಸುವಂತಿ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ರಾಜ್ಯೋತ್ಸವ ಆಚರಣೆ: ಮೆರವಣಿಗೆ ನಡೆಸುವಂತಿಲ್ಲ: ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ

ಬೆಂಗಳೂರು: ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವ ಆಚರಣೆ ಸಂದರ್ಭದಲ್ಲಿ 100 ಜನಕ್ಕಿಂತ ಹೆಚ್ಚು ಸೇರುವಂತಿಲ್ಲ ಹಾಗೂ ಯಾವುದೇ ಮೆರವಣಿಗೆ ನಡೆಸುವಂತಿ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಕೊರೊನಾ ಮಾರ್ಗ ಸೂಚಿ ಅನ್ವಯ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ರಾಜ್ಯೋತ್ಸವ ಆಚರಣೆಗೆ ಪ್ರತ್ಯೇಕ ಮಾರ್ಗಸೂಚಿ ಹೊರಡಿಸಿದ್ದು, ರಾಜ್ಯದಲ್ಲಿ ಕೊರೊನಾ ವೈರಸ್ ಹರಡುವಿಕೆಯನ್ನು ತಡೆಯಲು ನವೆಂಬರ್ 1 ರಂದು ರಾಜ್ಯೋತ್ಸವ ಕಾರ್ಯಕ್ರಮವನ್ನು ಅತ್ಯಂತ ಸರಳವಾಗಿ ಆಚರಣೆ ಮಾಡಬೇಕು.

ಕಾರ್ಯಕ್ರಮ ನಡೆಸುವ ಸ್ಥಳದಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸುವುದು ಹಾಗೂ ಸಾಮಾಜಿಕ ಅಂತರ ಕಾಯ್ದುಕೊಂಡು ಸ್ಯಾನಿಟೈಸರ್ ಹಾಕಿಕೊಳ್ಳಬೇಕು. ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ನಡೆಸುವ ಕಾರ್ಯಕ್ರಮಗಳನ್ನು ನಿಷೇಧಿಸಲಾಗಿದೆ. ರಾಜ್ಯೋತ್ಸವದ ಆಚರಣೆ ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಮತ್ತು ಸಾಮರಸ್ಯ ಉಂಟಾಗಲು ಗೌರವ ಪೂರಕವಾಗಿ ಸಮಾಜದಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ಆಚರಿಸಬೇಕು.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com