ರಾಜ್ಯದಲ್ಲಿ ತಗ್ಗಿದ ಕೊರೋನಾ ಹಾವಳಿ: ಇಂದು ಅತೀ ಕಡಿಮೆ 3,014 ಸೋಂಕು ಪತ್ತೆ, 7,468 ಡಿಸ್ಚಾರ್ಜ್!

ರಾಜ್ಯದಲ್ಲಿ ಕೊರೋನಾ ವೈರಸ್ ಅಟ್ಟಹಾಸ ಕಡಿಮೆಯಾಗುತ್ತಿದ್ದು, ಇಂದು 3,014 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 8,23,412ಕ್ಕೆ ಏರಿಕೆಯಾಗಿದೆ.
ಸುಧಾಕರ್
ಸುಧಾಕರ್

ಬೆಂಗಳೂರು: ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಅಟ್ಟಹಾಸ ಕಡಿಮೆಯಾಗುತ್ತಿದ್ದು, ಇಂದು 3,014 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 8,23,412ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಕೊರೋನಾ ವೈರಸ್ ನಿಂದಾಗಿ ಕಳೆದ 24 ಗಂಟೆಯಲ್ಲಿ 28 ಮಂದಿ ಕೊರೋನಾಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 11,168ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಸತತ 17ನೇ ದಿನವೂ ಸೋಂಕು ಪ್ರಕರಣಕ್ಕಿಂತ ಚೇತರಿಕೆ ಪ್ರಮಾಣ ಹೆಚ್ಚಾಗಿದೆ ಎಂದು ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಅವರು ಟ್ವೀಟ್ ಮಾಡಿದ್ದಾರೆ. 

ಇಂದು ಬೆಂಗಳೂರು ನಗರವೊಂದರಲ್ಲೆ ಅತಿ ಹೆಚ್ಚು ಅಂದರೆ 1,621 ಹೊಸ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಸಿಲಿಕಾನ್ ಸಿಟಿಯ ಸೋಂಕಿತರ ಸಂಖ್ಯೆ 3,36,469ಕ್ಕೆ ಏರಿಕೆಯಾಗಿದೆ. ನಗರದಲ್ಲಿ ಇಂದು 17 ಮಂದಿ ಕೊರೋನಾದಿಂದ ಮೃತಪಟ್ಟಿದ್ದಾರೆ.

ಇಂದು 7,468 ಮಂದಿ ಆಸ್ಪತ್ಪೆಯಿಂದ ಡಿಸ್ಚಾರ್ಜ್ ಆಗಿದ್ದು, ಗುಣಮುಖರಾದವರ ಸಂಖ್ಯೆ 7,57,208ಕ್ಕೆ ಏರಿಕೆಯಾಗಿದೆ. 55,017 ಮಂದಿ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com