ವಿಧಾನ ಪರಿಷತ್ ನ ನಾಲ್ಕು ಸ್ಥಾನಗಳ ಚುನಾವಣೆ: ನವೆಂಬರ್ 2ರ ಬದಲು 10ಕ್ಕೆ ಫಲಿತಾಂಶ
ಇದೇ ತಿಂಗಳ 28ರಂದು ನಡೆದ ವಿಧಾನ ಪರಿಷತ್ ನ ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆಯ ಮತ ಎಣಿಕೆಯ ದಿನಾಂಕವನ್ನು ಮುಂದೂಡಲಾಗಿದ್ದು, ನವೆಂಬರ್ 10ರಂದು ಫಲಿತಾಂಶ ಪ್ರಕಟಗೊಳ್ಳಲಿದೆ.
Published: 31st October 2020 09:28 PM | Last Updated: 01st November 2020 01:03 AM | A+A A-

ಚುನಾವಣಾ ಆಯೋಗ
ಬೆಂಗಳೂರು: ಇದೇ ತಿಂಗಳ 28ರಂದು ನಡೆದ ವಿಧಾನ ಪರಿಷತ್ ನ ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆಯ ಮತ ಎಣಿಕೆಯ ದಿನಾಂಕವನ್ನು ಮುಂದೂಡಲಾಗಿದ್ದು, ನವೆಂಬರ್ 10ರಂದು ಫಲಿತಾಂಶ ಪ್ರಕಟಗೊಳ್ಳಲಿದೆ.
ಈ ಮೊದಲು ನವೆಂಬರ್ 2ರಂದು ಮತ ಎಣಿಕೆ ನಡೆದು, ಫಲಿತಾಂಶ ಪ್ರಕಟಿಸಲಾಗುವುದು ಎಂದು ಚುನಾವಣಾ ಆಯೋಗ ಪ್ರಕಟಿಸಿತ್ತು. ಆದರೆ ಇಂದು ಪರಿಷ್ಕೃತ ದಿನಾಂಕ ಪ್ರಕಟಿಸಿ ಸುತ್ತೋಲೆ ಹೊರಡಿಸಿದೆ.
ಆಗ್ನೇಯ ಪದವೀಧರ ಕ್ಷೇತ್ರ, ಕರ್ನಾಟಕ ಪಶ್ಚಿಮ ಪದವೀಧರ ಕ್ಷೇತ್ರ, ಬೆಂಗಳೂರು ಶಿಕ್ಷಕರ ಕ್ಷೇತ್ರ ಮತ್ತು ಈಶಾನ್ಯ ಶಿಕ್ಷಕರ ಕ್ಷೇತ್ರದಿಂದ ಅಕ್ಟೋಬರ್ 28ರಂದು ಮತದಾನ ನಡೆದಿತ್ತು. ಎಲ್ಲಾ ಕ್ಷೇತ್ರಗಳಲ್ಲೂ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಅಭ್ಯರ್ಥಿಗಳನ್ನು ಕಣಕ್ಕಿಳಿಸಿತ್ತು.