ಮೈಸೂರು: 470 ಪೊಲೀಸರಿಗೆ ಕೊರೋನಾ ಸೋಂಕು ದೃಢ

ಮೈಸೂರು ಜಿಲ್ಲೆಯಲ್ಲಿ ಈ ವರೆಗೂ 470 ಪೊಲೀಸರಿಗೆ ಮಹಾಮಾರಿ ಕೊರೋನಾ ವೈರಸ್ ಸೋಂಕು ತಗುಲಿದೆ ಎಂದು ತಿಳಿದುಬಂದಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಮೈಸೂರು: ಮೈಸೂರು ಜಿಲ್ಲೆಯಲ್ಲಿ ಈ ವರೆಗೂ 470 ಪೊಲೀಸರಿಗೆ ಮಹಾಮಾರಿ ಕೊರೋನಾ ವೈರಸ್ ಸೋಂಕು ತಗುಲಿದೆ ಎಂದು ತಿಳಿದುಬಂದಿದೆ. 

ಮೈಸೂರು ನಗರದಲ್ಲಿ 323 ಪೊಲೀಸರಿಗೆ ಸೋಂಕು ತಗುಲಿದ್ದು, ಇದರಲ್ಲಿ 170 ನಾಗರೀಕ ಸೇವಾ ಪೊಲೀಸರು, 26 ಕರ್ನಾಟಕ ಪೊಲೀಸ್ ಅಕಾಡೆಮಿ, 96 ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಪಡೆ, 6 ರೈಲ್ವೇ ಪೊಲೀಸರಿಗೆ ಸೋಂಕು ದೃಢಪಟ್ಟಿದೆ. 470 ಸೋಂಕಿತರ ಪೊಲೀಸರ ಪೈಕಿ ಈ ವರೆಗೂ 223 ಮಂದಿ ಪೊಲೀಸರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದು, ಉಳಿದ ಪೊಲೀಸರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ತಿಳಿದುಬಂದಿದೆ. 

ಇನ್ನುಳಿದ 147 ಮಂದಿ ಪೊಲೀಸ್ ಸಿಬ್ಬಂದಿಗಳು ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗೆ ಸೇರಿದವರಾಗಿದ್ದು, ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ವರೆಗೂ ಮಹಾಮಾರಿ ವೈರಸ್ ನಾಲ್ವರು ಪೊಲೀಸರನ್ನು ಬಲಿ ಪಡೆದುಕೊಂಡಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

ಕೇವಲ ಠಾಣೆಯ ಸಿಬ್ಬಂದಿಗಳಿಗಷ್ಟೇ ಅಲ್ಲದೆ, ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ, ಮೈಸೂರು ಪೊಲೀಸ್ ವರಿಷ್ಠಾಧಿಕಾರಿ ಸಿ ಬಿ ರಿಶ್ಯಂತ್ ಸೇರಿದಂತೆ ಉನ್ನತ ಪೊಲೀಸರು ಕೂಡ ಸೋಂಕಿಗೊಳಗಾಗಿದ್ದರು. ಸೋಂಕಿತರ ಜೊತೆಗೆ ಜೊತೆಗೆ ಗುಣಮುಖರಾಗುತ್ತಿರುವವರ ಸಂಖ್ಯೆ ಕೂಡ ಜಿಲ್ಲೆಯಲ್ಲಿ ಏರಿಕೆ ಕಾಣುತ್ತಿದೆ ಎಂದು ತಿಳಿದುಬಂದಿದೆ. 

ಸೋಂಕು ನಿಯಂತ್ರಿಸಲು ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಕೇಂದ್ರ ಸರ್ಕಾರ, ರಾಜ್ಯ ಸರ್ಕಾರ ಮಾರ್ಗಸೂಚಿಗಳನ್ನು ಅನುಸರಿಸಲಾಗುತ್ತಿದೆ. ಈ ವರೆಗೂ ಕೊರೋನಾ ವಿರುದ್ಧದ ಹೋರಾಟದಲ್ಲಿ ನಾಲ್ವರು ಸಿಬ್ಬಂದಿಗಳನ್ನು ಕಳೆದುಕೊಂಡಿದ್ದೇವೆ. ಭವಿಷ್ಯದಲ್ಲಿ ಇಂತಹ ಘಟನೆಗಳು ಸಂಭವಿಸದಂತೆ ಎಚ್ಚರ ವಹಿಸಲು ಈಗಾಗಲೇ 50 ವರ್ಷ ಮೇಲ್ಪಟ್ಟ ಸಿಬ್ಬಂದಿಗಳು ಹಾಗೂ ಅಧಇಕಾರಿಗಳಿಗೆ ಆಗಾಗ ಪರೀಕ್ಷೆಗೊಳಗಾಗುವಂತೆ ಸೂಚಿಸಲಾಗಿದೆ. ಅಪಾಯದಲ್ಲಿರುವವರಿಗೆ ಹೋಮ್ ಐಸೋಲೇಷನ್ ನಲ್ಲಿರುವಂತೆ ಸೂಚಿಸಲಾಗಿದೆ. ಸೋಂಕಿನಿಂದ ಗುಣಮುಖರಾದ ಸಿಬ್ಬಂದಿಗಳು ಕೇವಲ ಕರ್ತವ್ಯಕ್ಕಷ್ಟೇ ಮರಳುತ್ತಿಲ್ಲ, ಇತರರಿಗೆ ಉದಾಹರಣೆಯಾಗುವಂತೆ ಪ್ಲಾಸ್ಮಾ ದಾನ ಮಾಡುತ್ತಿದ್ದಾರೆಂದು ಹೆಚ್ಚುವರಿ ಪೊಲೀಸ್ ಅಧೀಕ್ಷಕ ಶಿವಕುಮಾರ್ ಆರ್. ಶಿವಕುಮಾರ್ ಅವರು ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com