ಜೆಇಇ ಪರೀಕ್ಷೆ ನಡೆಯುವ ಸ್ಥಳಗಳಲ್ಲಿ ಅಗತ್ಯ ಮುನ್ನೆಚ್ಚರಿಕಾ  ಕ್ರಮ- ಡಾ. ಸುಧಾಕರ್ 

ಕೋವಿಡ್-19 ಹಿನ್ನೆಲೆಯಲ್ಲಿ ಇಂದಿನಿಂದ ಸೆಪ್ಟೆಂಬರ್ 6ರವರೆಗೂ ನಡೆಯಲಿರುವ  ಜೆಇಇ ಪರೀಕ್ಷೆಗಾಗಿ ಎಲ್ಲಾ ರೀತಿಯ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್  ತಿಳಿಸಿದ್ದಾರೆ.
ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್
ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್

ಬೆಂಗಳೂರು: ಕೋವಿಡ್-19 ಹಿನ್ನೆಲೆಯಲ್ಲಿ ಇಂದಿನಿಂದ ಸೆಪ್ಟೆಂಬರ್ 6ರವರೆಗೂ ನಡೆಯಲಿರುವ  ಜೆಇಇ ಪರೀಕ್ಷೆಗಾಗಿ ಎಲ್ಲಾ ರೀತಿಯ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್  ತಿಳಿಸಿದ್ದಾರೆ.

ಎಸ್ ಎಸ್ ಎಲ್ ಸಿ, ವೈದ್ಯಕೀಯ ಸ್ನಾತಕೋತ್ತರ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಿದಂತೆ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ತೊಂದರೆಯಾಗದ ರೀತಿಯಲ್ಲಿ  ಜೆಇಇ ಪರೀಕ್ಷೆಯನ್ನು ನಡೆಸಲಾಗುವುದು ಎಂದು ಸುದ್ದಿಸಂಸ್ಥೆಯೊಂದಕ್ಕೆ ಅವರು ಹೇಳಿದ್ದಾರೆ.

ವೃತ್ತಿಪರ ಕೋರ್ಸ್ ಗಳಿಗೆ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಸುರಕ್ಷತೆ ಒದಗಿಸುವುದು ಸರ್ಕಾರದ ಜವಾಬ್ದಾರಿಯಾಗಿದ್ದು, ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ಬಿಹಾರ, ಗೋವಾ, ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ಪರೀಕ್ಷೆ ನಡೆಸುತ್ತಿದ್ದು, ಸೆಪ್ಟೆಂಬರ್ 13 ರಂದು ನೀಟ್ ಪರೀಕ್ಷೆ ನಡೆಯಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com