ಬಾಗಲಕೋಟೆ: ಪ್ಲಾಸ್ಮಾ ಚಿಕಿತ್ಸೆಯಿಂದ ಗುಣಮುಖನಾದ ಜಿಲ್ಲೆಯ ಮೊದಲ ವ್ಯಕ್ತಿ!

ಗಂಭೀರ ಸ್ಥಿತಿಯಲ್ಲಿದ್ದ ಜಿಲ್ಲೆಯ ವ್ಯಕ್ತಿಯೊಬ್ಬರಿಗೆ ಪ್ಲಾಸ್ಮಾ ಚಿಕಿತ್ಸೆ ನಡೆಸಲಾಗಿದ್ದು, ವ್ಯಕ್ತಿ ಪೂರ್ಣ ಪ್ರಮಾಣದಲ್ಲಿ ಚೇತರಿಸಿಕೊಂಡಿದ್ದು, ಇನ್ನು ಕೆಲವೇ ದಿನಗಳಲ್ಲಿ ಆಸ್ಪತ್ರೆಯಿಂದ ಬಿಡುಗಡೆಗೊಳ್ಳಲಿದ್ದಾರೆಂದು ತಿಳಿದುಬಂದಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬಾಗಲಕೋಟೆ: ಗಂಭೀರ ಸ್ಥಿತಿಯಲ್ಲಿದ್ದ ಜಿಲ್ಲೆಯ ವ್ಯಕ್ತಿಯೊಬ್ಬರಿಗೆ ಪ್ಲಾಸ್ಮಾ ಚಿಕಿತ್ಸೆ ನಡೆಸಲಾಗಿದ್ದು, ವ್ಯಕ್ತಿ ಪೂರ್ಣ ಪ್ರಮಾಣದಲ್ಲಿ ಚೇತರಿಸಿಕೊಂಡಿದ್ದು, ಇನ್ನು ಕೆಲವೇ ದಿನಗಳಲ್ಲಿ ಆಸ್ಪತ್ರೆಯಿಂದ ಬಿಡುಗಡೆಗೊಳ್ಳಲಿದ್ದಾರೆಂದು ತಿಳಿದುಬಂದಿದೆ. 

ಸೋಂಕಿತ ವ್ಯಕ್ತಿಗೆ ಜಿಲ್ಲೆಯ ಎಸ್.ನಿಜಲಿಂಗಪ್ಪ ವೈದ್ಯಕೀಯ ಕಾಲೇಜು ಮತ್ತು ಹನಗಲ್ ಶ್ರೀ ಕುಮಾರೇಶ್ವರ್ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಲ್ಲಿ ನಡೆಸಲಾಗಿದೆ. ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ (ಕಿಮ್ಸ್) ಹುಬ್ಬಳ್ಳಿಯನ್ನು ಹೊರತುಪಡಿಸಿದರೆ, ಉತ್ತರ ಕರ್ನಾಟಕದಲ್ಲಿ ಪ್ಲಾಸ್ಮಾ ಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸುವ ಇರುವ ಏಕೈಕ ಸಂಸ್ಥೆ ಇದಾಗಿದೆ. 

ಪ್ರೊ.ಡಾ.ಶ್ರೀರಾಮ್ ಎ ಕೊರಾ ಅವರು ಮಾತನಾಡಿ, ಡಿಸಿಜಿಐ ಅನುಮತಿ ನೀಡಿದ ಕೂಡಲೇ ಕ್ಲಿನಿಕಲ್ ಟ್ರೈಯಲ್ ನಡೆಸಲಾಗಿತ್ತು. 47 ವರ್ಷದ ಸೋಂಕಿತ ವ್ಯಕ್ತಿಗೆ ಪ್ಲಾಸ್ಮಾ ಚಿಕಿತ್ಸೆ ನೀಡಲಾಗಿತ್ತು. ಆರಂಭದಲ್ಲಿ ಚಿಕಿತ್ಸೆ ಯಶಸ್ವಿಯಾಗಿತ್ತು. ಆಗಸ್ಟ್ 17 ರಂದು ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿಯ ಸ್ಥಿತಿ ಚಿಂತಾಜನಕವಾಗಿತ್ತು. ಆಸ್ಪತ್ರೆಯ ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗಿತ್ತು. ಪ್ಲಾಸ್ಮಾ ಚಿಕಿತ್ಸೆ ನೀಡುತ್ತಿದ್ದಂತೆಯೇ ವ್ಯಕ್ತಿ ಚಿಕಿತ್ಸೆಗೆ ಸ್ಪಂದನೆ ನೀಡಿದ್ದ. ಇದೀಗ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದಾರೆ. ಇನ್ನು ಕೆಲವೇ ದಿನಗಳಲ್ಲಿ ಆಸ್ಪತ್ರೆಯಿಂದ ಬಿಡುಗಡೆಗೊಳ್ಳಲಿದ್ದಾರೆಂದು ಹೇಳಿದ್ದಾರೆ. 

ಕೊರೋನಾ ಸೋಂಕಿನಿಂದ ಗುಣಮುಖರಾದ ವ್ಯಕ್ತಿಯಿಂದ ಪಡೆಯಲಾದ ಪ್ಲಾಸ್ಮಾದಿಂದ ಈ ಚಿಕಿತ್ಸೆ ನಡೆಸಲಾಗುತ್ತದೆ. ಗುಣಮುಖರಾದ ವ್ಯಕ್ತಿಯ ದೇಹದಲ್ಲಿರುವ ಆ್ಯಂಟಿಬಾಡಿ ಮತ್ತೊಬ್ಬ ಸೋಂಕಿತ ವ್ಯಕ್ತಿಯ ಚಿಕಿತ್ಸೆಗೆ ಸಹಾಯ ಮಾಡುತ್ತದೆ. ವ್ಯಕ್ತಿಯ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಇದು ಸಹಾಯಕವಾಗಿದೆ ಎಂದು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com