ಬೆಂಗಳೂರು ಗಲಭೆ: ಎಸ್‌ಡಿಪಿಐ ಕಚೇರಿ ಮೇಲೆ ಸಿಸಿಬಿ ದಾಳಿ‌, ದಾಖಲೆ ಪರಿಶೀಲನೆ

ಡಿಜೆ ಹಳ್ಳಿ ಹಾಗೂ ಕೆ.ಜಿ.ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿ ಎಸ್‌ಡಿಪಿಐ ಕಚೇರಿಗಳ‌ ಮೇಲೆ ಸಿಸಿಬಿ ಪೊಲೀಸರು ದಾಳಿ‌ ನಡೆಸಿ ಪರಿಶೀಲನೆ ನಡೆಸಿದ್ದಾರೆ. 
ಬೆಂಗಳೂರು ಗಲಭೆ: ಎಸ್‌ಡಿಪಿಐ ಕಚೇರಿ ಮೇಲೆ ಸಿಸಿಬಿ ದಾಳಿ‌, ದಾಖಲೆ ಪರಿಶೀಲನೆ

ಬೆಂಗಳೂರು: ಡಿಜೆ ಹಳ್ಳಿ ಹಾಗೂ ಕೆ.ಜಿ.ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿ ಎಸ್‌ಡಿಪಿಐ ಕಚೇರಿಗಳ‌ ಮೇಲೆ ಸಿಸಿಬಿ ಪೊಲೀಸರು ದಾಳಿ‌ ನಡೆಸಿ ಪರಿಶೀಲನೆ ನಡೆಸಿದ್ದಾರೆ. 

ನ್ಯಾಯಾಲಯದಿಂದ ಸರ್ಚ್ ವಾರಂಟ್ ಪಡೆದು, ಡಿಜೆ ಹಳ್ಳಿ, ಕೆ.ಜಿ.ಹಳ್ಳಿ, ಹಲಸೂರು ಗೇಟ್‌ನಲ್ಲಿರುವ ಪಕ್ಷದ ಕಚೇರಿಗಳಲ್ಲಿ ಶೋಧ ನಡೆಸಿ ಪರಿಶೀಲನೆ ನಡೆಸಲಾಗಿದೆ ಎಂದು ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ತಿಳಿಸಿದ್ದಾರೆ.

ಕಚೇರಿಯ ದಾಳಿ ವೇಳೆ ಕೆಲವು ದಾಖಲೆ ಪತ್ರಗಳನ್ನು ಪರಿಶೀಲನೆ ನಡೆಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಘಟನೆ ಸಂಬಂಧ ಎಸ್​ಡಿಪಿಐ ಕಾರ್ಯಕರ್ತ, ಕಾರ್ಪೊರೇಟರ್ ಚುನಾವಣೆಗೆ ಸ್ಪರ್ಧಿಸಿದ್ದ ಮುಜಾಮಿಲ್ ಪಾಷಾನನ್ನು ಸಿಸಿಬಿ ಬಂಧಿಸಿದೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com