ಗಲಭೆ ನಡೆದಿದ್ದ ಡಿ.ಜೆ ಹಳ್ಳಿ ಠಾಣೆಗೆ ಸಿದ್ದರಾಮಯ್ಯ ಭೇಟಿ, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಗೆ ಆಗ್ರಹ!

ಬೆಂಗಳೂರು ಗಲಭೆ ಪ್ರಕರಣದಲ್ಲಿ ಭಾಗಿಯಾಗಿದ್ದ ಎಲ್ಲ ತಪ್ಪಿತಸ್ಥರಿಗೂ ಕಠಿಣ ಶಿಕ್ಷೆಯಾಗಬೇಕು ಎಂದು ಮಾಜಿ ಸಿಎಂ ಹಾಗೂ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

Published: 02nd September 2020 02:42 PM  |   Last Updated: 02nd September 2020 02:42 PM   |  A+A-


Siddaramaiah

ಡಿಜೆ ಹಳ್ಳಿಯಲ್ಲಿ ಸಿದ್ದರಾಮಯ್ಯ ಪರಿಶೀಲನೆ

Posted By : srinivasamurthy
Source : Online Desk

ಬೆಂಗಳೂರು: ಬೆಂಗಳೂರು ಗಲಭೆ ಪ್ರಕರಣದಲ್ಲಿ ಭಾಗಿಯಾಗಿದ್ದ ಎಲ್ಲ ತಪ್ಪಿತಸ್ಥರಿಗೂ ಕಠಿಣ ಶಿಕ್ಷೆಯಾಗಬೇಕು ಎಂದು ಮಾಜಿ ಸಿಎಂ ಹಾಗೂ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಗಲಭೆ ನಡೆದಿದ್ದ ಡಿಜೆ ಹಳ್ಳಿ ಮತ್ತು ಕೆಜೆ ಹಳ್ಳಿಗಳಿಗೆ ಭೇಟಿ ನೀಡಿದ ಸಿದ್ದರಾಮಯ್ಯ ಅವರು, ಅಧಿಕಾರಿಗಳಿಂದ ಪ್ರಕರಣದ ಮಾಹಿತಿ ಕಲೆಹಾಕಿದರು. ಈ ವೇಳೆ ಸಂಪೂರ್ಣ ಪ್ರಕರಣದ ಪೂರ್ವಾಪರ ಪರಿಶೀಲಿಸಿದ ಅವರು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಸಿಹಿದರು.

ಅಂತೆಯೇ ಇದೇ ವಿಚಾರವಾಗಿ ಟ್ವೀಟ್ ಮಾಡಿರುವ ಅವರು, 'ಡಿ.ಜೆ. ಹಳ್ಳಿಯಲ್ಲಿ ನಡೆದ ಗಲಭೆ ಸಂದರ್ಭದಲ್ಲಿ ಹಾನಿಗೊಳಗಾಗಿದ್ದ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಮನೆ ಹಾಗೂ ಪೊಲೀಸ್ ಠಾಣೆಗೆ ಭೇಟಿನೀಡಿ, ಡಿಸಿಪಿ ಶರಣಪ್ಪ ಅವರಿಂದ ಘಟನೆಯ ಮಾಹಿತಿ ಪಡೆದುಕೊಂಡೆ. ಈ ವೇಳೆ ಶಾಸಕರಾದ ರಿಜ್ವಾನ್ ಅರ್ಷದ್, ನಸೀರ್ ಅಹ್ಮದ್, ವೆಂಕಟರಮಣಪ್ಪ ಅವರು ಸೇರಿದಂತೆ ಹಲವರು ಜೊತೆಗಿದ್ದರು. ಡಿ.ಜೆ ಹಳ್ಳಿಯಲ್ಲಿ ಗಲಭೆ ನಡೆದ ಸಂದರ್ಭದಲ್ಲಿ ನಾನು ಕೊರೊನಾ ಸೋಂಕಿನಿಂದಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದೆ, ಸೋಂಕಿನಿಂದ ಗುಣಮುಖನಾದ ನಂತರ ಕೆಲವು ದಿನಗಳ ಕಾಲ ಹೋಂ ಕ್ವಾರೆಂಟೈನ್‌ಗೂ ಒಳಗಾಗಿದ್ದೆ. ಈ ಎಲ್ಲಾ ಕಾರಣಗಳಿಂದಾಗಿ ಘಟನೆ ನಡೆದ ಸ್ಥಳಕ್ಕೆ ಇಂದು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದೇನೆ. ಒಂದುವೇಳೆ ಪ್ರವಾದಿ ಮಹಮದ್ ಅವರ ವಿರುದ್ಧ ನಿಂದನಾತ್ಮಕ ಬರಹ ಪ್ರಕಟಿಸಿದ ನವೀನ್‌ನ ಶೀಘ್ರ ಬಂಧನವಾಗಿದ್ದರೆ ಪರಿಸ್ಥಿತಿ ಕೈಮೀರಿ ಹೋಗುತ್ತಿರಲಿಲ್ಲವೇನೊ. ಗಲಭೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಹಾಗೂ ಗಲಭೆ ಪ್ರಕರಣದಲ್ಲಿ ಭಾಗಿಯಾದ ಎಲ್ಲಾ ಆರೋಪಿಗಳಿಗೆ ಕಠಿಣ ಶಿಕ್ಷೆ ಆಗಬೇಕೆಂದು ಒತ್ತಾಯಿಸುತ್ತೇನೆ ಎಂದು ಹೇಳಿದ್ದಾರೆ.

ಅಂತೆಯೇ ಪ್ರಕರಣದಲ್ಲಿ ಭಾಗಿಯಾಗದ ಹಲವರು ಈಗಾಗಲೇ ಬಂಧನಕ್ಕೊಳಗಾಗಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಹಾಗಾಗಿ ಯಾರ ವಿರುದ್ಧ ಸೂಕ್ತ ಸಾಕ್ಷ್ಯಗಳಿಲ್ಲ, ಯಾರು ನಿರಪರಾಧಿಗಳಿದ್ದಾರೆ ಅಂಥವರನ್ನು ಕೂಡಲೇ ಬಿಡುಗಡೆ ಮಾಡಬೇಕು ಮತ್ತು ನೈಜ ಅಪರಾಧಿಗಳು ಯಾರೇ ಆಗಿರಲಿ ಅಂಥವರ  ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದೂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.


Stay up to date on all the latest ರಾಜ್ಯ news
Poll
CBSE board exam

12 ನೇ ತರಗತಿ ಮೌಲ್ಯಮಾಪನಕ್ಕೆ 10 ನೇ ತರಗತಿ ಅಂಕಗಳನ್ನು ಸೇರಿಸುವ ಸಿಬಿಎಸ್‌ಇ ಸೂತ್ರವನ್ನು ನೀವು ಬೆಂಬಲಿಸುತ್ತೀರಾ?


Result
ಹೌದು
ಇಲ್ಲ
flipboard facebook twitter whatsapp