ರಾಜ್ಯದಲ್ಲಿ ಕೊರೋನಾಗೆ ಇಂದು 113 ಬಲಿ, ಬೆಂಗಳೂರಿನಲ್ಲಿ 3420 ಸೇರಿ 9860 ಮಂದಿಗೆ ಪಾಸಿಟಿವ್

ರಾಜ್ಯದಲ್ಲಿ ಕೊರೋನಾ ವೈರಸ್ ಅಟ್ಟಹಾಸ ಮುಂದುವರೆದಿದ್ದು, ಬುಧವಾರ ಸಹ ಬರೋಬ್ಬರಿ 9860 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 3,61341ಕ್ಕೆ ಏರಿಕೆಯಾಗಿದೆ.
ಸಾಂದದರ್ಭಿಕ ಚಿತ್ರ
ಸಾಂದದರ್ಭಿಕ ಚಿತ್ರ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಅಟ್ಟಹಾಸ ಮುಂದುವರೆದಿದ್ದು, ಬುಧವಾರ ಸಹ ಬರೋಬ್ಬರಿ 9860 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 3,61341ಕ್ಕೆ ಏರಿಕೆಯಾಗಿದೆ.

ಇನ್ನು ರಾಜ್ಯದಲ್ಲಿ ಇಂದು 113 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 5950ಕ್ಕೆ ಏರಿಕೆಯಾಗಿದೆ.

ಕೊರೋನಾ ವೈರಸ್ ನಿಂದಾಗಿ ಕಳೆದ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ 32 ಸೋಂಕಿತರು ಸೇರಿದಂತೆ ರಾಜ್ಯದಲ್ಲಿ ಒಟ್ಟು 113 ಮಂದಿ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಇಂದು ಬೆಂಗಳೂರು ನಗರವೊಂದರಲ್ಲೆ ಅತಿ ಹೆಚ್ಚು ಅಂದರೆ 3420 ಹೊಸ ಪ್ರಕರಣಗಳು ವರದಿಯಾಗಿದ್ದು, ರಾಜ್ಯದಲ್ಲಿ ಒಟ್ಟು 9850 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಇಂದು 6287 ಮಂದಿ ಆಸ್ಪತ್ಪೆಯಿಂದ ಡಿಸ್ಚಾರ್ಜ್ ಆಗಿದ್ದು, ಗುಣಮುಖರಾದವರ ಸಂಖ್ಯೆ  2,60,913ಕ್ಕೆ ಏರಿಕೆಯಾಗಿದೆ. 94, 459 ಮಂದಿ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪೈಕಿ 751 ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com