ಸಿಲಿಕಾನ್ ಸಿಟಿಯಲ್ಲಿ ಭಾರಿಮಳೆ, ತಗ್ಗು ಪ್ರದೇಶಗಳಿಗೆ ನುಗ್ಗಿದ ನೀರು, ಇನ್ನೂ ಮೂರು ದಿನ ಭಾರಿ ಮಳೆ ಸಾಧ್ಯತೆ!

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೆ ಭಾರೀ ಮಳೆಯಾಗಿದ್ದು, ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಅಲ್ಲದೆ ಮುಂದಿನ ಮೂರು ದಿನಗಳ ಕಾಲ ನಗರದಲ್ಲಿ ಭಾರಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೆ ಭಾರೀ ಮಳೆಯಾಗಿದ್ದು, ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಅಲ್ಲದೆ ಮುಂದಿನ ಮೂರು ದಿನಗಳ ಕಾಲ ನಗರದಲ್ಲಿ ಭಾರಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಇಂದು ಮಧ್ಯಾಹ್ನ ಬೆಂಗಳೂರಿನ ಹಲವೆಡೆ ಸುಮಾರು ಅರ್ಧ ಗಂಟೆಗೂ ಅಧಿಕ ಸಮಯದ ಕಾಲ ಭಾರಿ ಮಳೆ ಸುರಿದಿದ್ದು, ಮಲ್ಲೇಶ್ವರಂ, ಯಶವಂತಪುರ, ವೈಯಾಲಿಕಾವಲ್, ಪ್ಯಾಲೇಸ್ ಗುಟ್ಟಹಳ್ಳಿ, ಶ್ರೀರಾಮಪುರ, ಚಾಮರಾಜಪೇಟೆ ಸೇರಿದಂತೆ ಹಲನವು ಪ್ರದೇಶಗಳಲ್ಲಿ ಭಾರೀ ಮಳೆಯಾಗಿದೆ. ಭಾರಿ  ಮಳೆಯಿಂದಾಗಿ ರಸ್ತೆಗಳು ತುಂಬಿ ಕೆರೆಯಂತಾಗಿದ್ದವು. ಹೀಗಾಗಿ ವಾಹನ ಸವಾರರು ಪರದಾಡುವಂತಾಗಿತ್ತು. ಮೆಜೆಸ್ಟಿಕ್, ಮಾಗಡಿ ರೋಡ್, ಚಾಮರಾಜಪೇಟೆ ಸೇರಿದಂತೆ ನಗರದ ಬಹುತೇಕ ಭಾರಿ ಮಳೆಯಿಂದಾಗಿ ಟ್ರಾಫಿಕ್ ಜಾಮ್ ಉಂಟಾಗಿತ್ತು.

ಇನ್ನೂ ಮೂರು ದಿನ ಭಾರಿ ಮಳೆ
ಇನ್ನು ಬೆಂಗಳೂರು ಸೇರಿದಂತೆ ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆಯಾಗುವ ಕುರಿತು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಮುಂದಿನ ಮೂರು ದಿನಗಳ ಕಾಲ ಬೆಂಗಳೂರು, ಮೈಸೂರು, ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ  ಇದೆ.ಮಳೆಯಾಗುತ್ತಿದೆ. ಮುಂಗಾರು ಚುರುಕಾಗಿದ್ದು, ಗುಡುಗು ಸಹಿತ ವರುಣ ಅರ್ಭರಿಸಲಿದ್ದಾನೆ. ಈಗಾಗಲೇ ಬೆಂಗಳೂರಿನಲ್ಲಿ 13 ಮಿಲಿ ಮೀಟರ್ ಮಳೆಯಾಗಿದೆದ್ದು, ಬೆಂಗಳೂರು ಪೂರ್ವ ಹಾಗೂ ಉತ್ತರದಲ್ಲಿ ಹೆಚ್ಚು ಮಳೆಯಾಗಲಿದೆ. ಮಳೆ ನಿರಂತರವಾಗಿ ಬಾರದೆ ಬಿಟ್ಟು ಬಿಟ್ಟು ಬರಲಿದೆ ಎಂದು ಹವಾಮಾನ  ಇಲಾಖೆ ತಿಳಿಸಿದೆ. 

ಮಲೆನಾಡು ಭಾಗದಲ್ಲಿ ಭಾರಿಮಳೆ, ಆರೆಂಜ್ ಅಲರ್ಟ್ ಘೋಷಣೆ
ಮುಂದಿನ ನಾಲ್ಕು ದಿನಗಳಕಾಲ ಮಲೆನಾಡು ಪ್ರದೇಶದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ, ನೀಡಿ ಈ ಭಾಗದಲ್ಲಿ ಆರೆಂಜ್ ಅಲರ್ಟ್ ಘೋಷಿಸಿದೆ. ಮುಂದಿನ ನಾಲ್ಕು ದಿನಗಳ ಕಾಲ ಮಲೆನಾಡು ಭಾಗದಲ್ಲಿ ಭಾರೀ ಮಳೆ ಆಗಲಿದೆ. ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಮತ್ತು ಹಾಸನ ಜಿಲ್ಲೆಗಳಲ್ಲಿ ಇದೆ 5ರವರೆಗೆ ಭಾರೀ ಮಳೆ ಯಾಗಲಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com