ರಾಜ್ಯದಲ್ಲಿ ಇಂದು ಕೊರೋನಾಗೆ 104 ಬಲಿ, ಬೆಂಗಳೂರಿನಲ್ಲಿ 3,189 ಸೇರಿ 8865 ಮಂದಿಗೆ ಪಾಸಿಟಿವ್
ರಾಜ್ಯದಲ್ಲಿ ಕೊರೋನಾ ವೈರಸ್ ಅಟ್ಟಹಾಸ ಮುಂದುವರೆದಿದ್ದು, ಗುರುವಾರ ಬರೋಬ್ಬರಿ 8865 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 3,70, 206ಕ್ಕೆ ಏರಿಕೆಯಾಗಿದೆ.
Published: 03rd September 2020 06:59 PM | Last Updated: 03rd September 2020 09:10 PM | A+A A-

ಸಾಂದರ್ಭಿಕ ಚಿತ್ರ
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಅಟ್ಟಹಾಸ ಮುಂದುವರೆದಿದ್ದು, ಗುರುವಾರ ಬರೋಬ್ಬರಿ 8865 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 3,70, 206ಕ್ಕೆ ಏರಿಕೆಯಾಗಿದೆ.
ಇನ್ನು ರಾಜ್ಯದಲ್ಲಿ ಇಂದು 104 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 6054ಕ್ಕೆ ಏರಿಕೆಯಾಗಿದೆ.
ಕೊರೋನಾ ವೈರಸ್ ನಿಂದಾಗಿ ಕಳೆದ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ 29 ಸೋಂಕಿತರು ಸೇರಿದಂತೆ ರಾಜ್ಯದಲ್ಲಿ ಒಟ್ಟು 104 ಮಂದಿ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಇಂದು ಬೆಂಗಳೂರು ನಗರವೊಂದರಲ್ಲೆ ಅತಿ ಹೆಚ್ಚು ಅಂದರೆ 3189 ಹೊಸ ಪ್ರಕರಣಗಳು ವರದಿಯಾಗಿದ್ದು, ರಾಜ್ಯದಲ್ಲಿ ಒಟ್ಟು 8865 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಇಂದು 7122 ಮಂದಿ ಆಸ್ಪತ್ಪೆಯಿಂದ ಡಿಸ್ಚಾರ್ಜ್ ಆಗಿದ್ದು, ಗುಣಮುಖರಾದವರ ಸಂಖ್ಯೆ 2,68,035ಕ್ಕೆ ಏರಿಕೆಯಾಗಿದೆ. 96,098 ಮಂದಿ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪೈಕಿ 735 ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಬೆಂಗಳೂರು ಹೊರತುಪಡಿಸಿದರೆ ಮೈಸೂರು, ಬೆಳಗಾವಿ ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ಪಾಸಿಟಿವ್ ಕೇಸ್‌ಗಳು ಹೆಚ್ಚಾಗಿ ಕಂಡುಬಂದಿವೆ. ಈ ಮೂರು ಜಿಲ್ಲೆಗಳಲ್ಲಿ ಕ್ರಮವಾಗಿ 475, 454 ಹಾಗೂ 424 ಪ್ರಕರಣಗಳು ಪತ್ತೆಯಾಗಿವೆ. ಇನ್ನು, ಬಾಗಲಕೋಟೆ 123, ಬೆಂಗಳೂರು ಗ್ರಾಮಾಂತರ 160, ಬೀದರ್ 56, ಚಾಮರಾಜನಗರ 43, ಚಿಕ್ಕಬಳ್ಳಾಪುರ 104, ಚಿಕ್ಕಮಗಳೂರು 123, ಚಿತ್ರದುರ್ಗ 151 ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ 316 ಕೇಸ್‌ಗಳು ಕಂಡುಬಂದಿವೆ.
ದಾವಣಗೆರೆಯಲ್ಲಿ 222, ಧಾರವಾಡ 342, ಗದಗ 183, ಹಾವೇರಿ 252, ಕಲಬುರಗಿ 195, ಕೊಡಗು 82, ಕೋಲಾರ 103, ಕೊಪ್ಪಳ 226, ಮಂಡ್ಯ 239, ರಾಯಚೂರು 161, ರಾಮನಗರ 67, ಶಿವಮೊಗ್ಗ 251, ತುಮಕೂರು 132, ಉಡುಪಿ 228, ಉತ್ತರ ಕನ್ನಡ 182, ವಿಜಯಪುರ 131 ಹಾಗೂ ಯಾದಗಿರಿಯಲ್ಲಿ 112 ಹೊಸ ಕೇಸ್‌ಗಳು ಪತ್ತೆಯಾಗಿವೆ.
ಇಂದಿನ 03/09/2020 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.@CMofKarnataka @BSYBJP @DVSadanandGowda @SureshAngadi_ @MoHFW_INDIA @UNDP_India @WHOSEARO @UNICEFIndia @sriramulubjp @drashwathcn @BSBommai https://t.co/GDJTfI9n5j pic.twitter.com/wu1lwkXDeR
— K'taka Health Dept (@DHFWKA) September 3, 2020