ಡಿ.ಜೆ.ಹಳ್ಳಿ ಗಲಭೆ ಪ್ರಕರಣ: ಕೇಂದ್ರಕ್ಕೆ ವರದಿ ಸಲ್ಲಿಸಿದ ರಾಜ್ಯ ಸರ್ಕಾರ  

ಪುಲಕೇಶಿನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಡಿ.ಜೆ. ಹಳ್ಳಿ, ಕೆ.ಜಿ.ಹಳ್ಳಿ ಹಾಗೂ ಕಾವಲ್ ಬೈರಸಂದ್ರದಲ್ಲಿ ಆಗಸ್ಟ್ 11ರಂದು ನಡೆದಿದ್ದ ಗಲಭೆಯ ಕುರಿತು ರಾಜ್ಯ ಸರ್ಕಾರ, ಕೇಂದ್ರ ಗೃಹ ಇಲಾಖೆಗೆ ವರದಿ ಸಲ್ಲಿಸಿದೆ.

Published: 03rd September 2020 09:20 AM  |   Last Updated: 03rd September 2020 09:20 AM   |  A+A-


File photo

ಸಂಗ್ರಹ ಚಿತ್ರ

Posted By : manjula
Source : UNI

ಬೆಂಗಳೂರು: ಪುಲಕೇಶಿನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಡಿ.ಜೆ. ಹಳ್ಳಿ, ಕೆ.ಜಿ.ಹಳ್ಳಿ ಹಾಗೂ ಕಾವಲ್ ಬೈರಸಂದ್ರದಲ್ಲಿ ಆಗಸ್ಟ್ 11ರಂದು ನಡೆದಿದ್ದ ಗಲಭೆಯ ಕುರಿತು ರಾಜ್ಯ ಸರ್ಕಾರ, ಕೇಂದ್ರ ಗೃಹ ಇಲಾಖೆಗೆ ವರದಿ ಸಲ್ಲಿಸಿದೆ.

ನವೀನ್ ಎನ್ನುವ ವ್ಯಕ್ತಿ ಮುಹಮ್ಮದ್ ಪೈಗಂಬರ್ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ್ದ ಹಿನ್ನೆಲೆಯಲ್ಲಿ ಅವರ ವಿರುದ್ಧ ಪ್ರಕರಣ ದಾಖಲಿಸಲು ಪೊಲೀಸರು ವಿಳಂಬ ಮಾಡಿದ್ದಾರೆ ಎಂದು ಆರೋಪಿಸಿ ನೂರಾರು ಜನರು ರಾತ್ರೋ ರಾತ್ರಿ ವಾಹನಗಳು ಹಾಗೂ ಶಾಸಕರ ಮನೆಗೂ ಬೆಂಕಿ ಹಚ್ಚಿ ಗಲಭೆ ನಡೆಸಿದ್ದರು.

ಈ ಗಲಭೆಯಲ್ಲಿ ಎಸ್‍ಡಿಪಿಐ ಪಾತ್ರ ಇದೆ ಎನ್ನುವ ಬಗ್ಗೆ ಆರೋಪಗಳು ಕೇಳಿ ಬಂದಿದ್ದು, ಈ ಸಂಘಟನೆಯನ್ನು ನಿಷೇಧ ಮಾಡಬೇಕೆಂಬ ಒತ್ತಡವೂ ಬಂದಿತ್ತು. ಅಲ್ಲದೇ ಗಲಭೆಯಲ್ಲಿ ಕಾಂಗ್ರೆಸ್ ನಾಯಕರ ಪಾತ್ರ ಇದೆ ಎನ್ನುವ ಅನುಮಾನವಿದ್ದು, ಈ ಕುರಿತು ರಾಜ್ಯ ಸರ್ಕಾರ ಮ್ಯಾಜಿಸ್ಟ್ರೇಟ್ ತನಿಖೆ ನಡೆಸುತ್ತಿದ್ದು, ಇದುವರೆಗೂ ಗಲಭೆಯಲ್ಲಿ 300 ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ.


Stay up to date on all the latest ರಾಜ್ಯ news
Poll
kangana ranaut

ಗುಲಾಮರು ಇಟ್ಟಿರುವ 'ಇಂಡಿಯಾ' ಹೆಸರನ್ನು 'ಭಾರತ್' ಎಂದು ಬದಲಾಯಿಸುವಂತೆ ಕಂಗನಾ ರಣಾವತ್ ಹೇಳಿದ್ದಾರೆ. ನೀವು ಏನಂತೀರಿ?


Result
ಹೌದು, ಅವರು ಹೇಳಿದ್ದು ಸರಿ.
ಇಲ್ಲ, ಇದು ತುಂಬಾ ಸಿಲ್ಲಿ.
flipboard facebook twitter whatsapp