ಗದಗ:ಕೊರೋನಾಗೆ ಹೆದರಿ ಆಸ್ಪತ್ರೆಯ 3ನೇ ಮಹಡಿಯಿಂದ ಜಿಗಿದು ಯುವಕ ಆತ್ಮಹತ್ಯೆ

ಕೋವಿಡ್-19 ಸಾಂಕ್ರಾಮಿಕ ಬಂದ ಮೇಲೆ ಹಲವರ ಜೀವನದ ಮೇಲೆ ಹಲವು ರೀತಿಯಲ್ಲಿ ಪರಿಣಾಮ ಬೀರಿದೆ. ಕೊರೋನಾಗೆ ಹೆದರಿ ಅಲ್ಲಲ್ಲಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಪ್ರಕರಣ ಸಹ ನಿಂತಿಲ್ಲ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಗದಗ: ಕೋವಿಡ್-19 ಸಾಂಕ್ರಾಮಿಕ ಬಂದ ಮೇಲೆ ಹಲವರ ಜೀವನದ ಮೇಲೆ ಹಲವು ರೀತಿಯಲ್ಲಿ ಪರಿಣಾಮ ಬೀರಿದೆ. ಕೊರೋನಾಗೆ ಹೆದರಿ ಅಲ್ಲಲ್ಲಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಪ್ರಕರಣ ಸಹ ನಿಂತಿಲ್ಲ.

ಗದಗ ಜಿಲ್ಲೆಯ ಹತ್ತಿರ ಡೊನಿ ಗ್ರಾಮದಲ್ಲಿ ಯುವಕನೊಬ್ಬ ಕೊರೋನಾಗೆ ಭಯಪಟ್ಟು ಆಸ್ಪತ್ರೆಯ ಮೂರನೇ ಮಹಡಿಯಿಂದ ಕೆಳಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಳೆದ ರಾತ್ರಿ ನಡೆದಿದೆ.

ಗುಲ್ಬರ್ಗ ವೈದ್ಯಕೀಯ ವಿಜ್ಞಾನ ಸಂಸ್ಥೆ(ಜಿಐಎಂಎಸ್)ಯಲ್ಲಿ ಈ ದುರ್ಘಟನೆ ನಡೆದಿದ್ದು ಯುವಕನಿಗೆ ನಿನ್ನೆ ಸಂಜೆ ಕೊರೋನಾ ಪಾಸಿಟಿವ್ ಎಂದು ವರದಿ ಬಂದಿತ್ತು. ನಂತರ ಆತ ತೀವ್ರ ಆಘಾತಕ್ಕೊಳಗಾಗಿದ್ದ ಎಂದು ತಿಳಿದುಬಂದಿದೆ. ಯುವಕನ ಬಗ್ಗೆ ಹೆಚ್ಚಿನ ಮಾಹಿತಿ ಸಿಕ್ಕಿಲ್ಲ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com