ಬೆಂಗಳೂರು ಗಲಭೆ: ಮದನ್ ಗೋಪಾಲ್ ನೇತೃತ್ವದ ಸತ್ಯ ಶೋಧನಾ ಸಮಿತಿಯಿಂದ ಮುಖ್ಯಮಂತ್ರಿಗೆ ವರದಿ ಸಲ್ಲಿಕೆ

ಬೆಂಗಳೂರಿನ ಡಿ.ಜೆ ಹಳ್ಳಿ ಮತ್ತು ಕೆ.ಜೆ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದ ವರದಿಯನ್ನು ನಿವೃತ್ತ ಅಪರ ಮುಖ್ಯಕಾರ್ಯದರ್ಶಿ ಮದನ್ ಗೋಪಾಲ್ ಅವರ ನೇತೃತ್ವದ ಸತ್ಯ ಶೋಧನಾ ಸಮಿತಿಯು ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಸಲ್ಲಿಸಿತು

Published: 04th September 2020 11:20 AM  |   Last Updated: 04th September 2020 11:21 AM   |  A+A-


Report_submit_to_CMBSY1

ಸತ್ಯ ಶೋಧನಾ ಸಮಿತಿಯಿಂದ ಮುಖ್ಯಮಂತ್ರಿಗೆ ವರದಿ ಸಲ್ಲಿಕೆ

Posted By : nagaraja
Source : UNI

ಬೆಂಗಳೂರು: ಬೆಂಗಳೂರಿನ ಡಿ.ಜೆ ಹಳ್ಳಿ ಮತ್ತು ಕೆ.ಜೆ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದ ವರದಿಯನ್ನು ನಿವೃತ್ತ ಅಪರ ಮುಖ್ಯಕಾರ್ಯದರ್ಶಿ ಮದನ್ ಗೋಪಾಲ್ ಅವರ ನೇತೃತ್ವದ ಸತ್ಯ ಶೋಧನಾ ಸಮಿತಿಯು ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಸಲ್ಲಿಸಿತು.ಸಮಿತಿಯ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಆಗಸ್ಟ್ 11ರಂದು ಪುಲಕೇಶಿನಗರ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿಯವರ ಸಂಬಂಧಿಯೊಬ್ಬ ಪ್ರವಾದಿ ಮುಹಮ್ಮದ್ ಅವರ ವಿರುದ್ಧ ಅವಹೇಳನಕಾರಿಯಾಗಿ ಫೇಸ್ ಬುಕ್ ನಲ್ಲಿ ಪೋಸ್ಟ್ ಹಾಕಿದ್ದರು.

 

ಇದಾದ ಬಳಿಕ ಉಂಟಾದ ಪ್ರತಿಭಟನೆ ಹಿಂಸಾಚಾರಕ್ಕೆ ಸಿಲುಕಿ  ಪೊಲೀಸ್ ಗೋಲಿಬಾರ್ ನಲ್ಲಿ ನಾಲ್ವರು ಮೃತಪಟ್ಟಿದ್ದರು.ಘಟನೆಯ ಬಗ್ಗೆ ಮ್ಯಾಜಿಸ್ಟ್ರೇಟ್ ತನಿಖೆ ಆರಂಭಗೊಂಡಿದೆ.


Stay up to date on all the latest ರಾಜ್ಯ news
Poll
Rahul gandhi

ಕಾಂಗ್ರೆಸ್‌ನಲ್ಲಿನ ಯುವ, ಕ್ರಿಯಾಶೀಲ ನಾಯಕರಿಂದ ರಾಹುಲ್ ಗಾಂಧಿಗೆ ಅಭದ್ರತೆ ಕಾಡುತ್ತಿದೆಯೇ?


Result
ಹೌದು
ಇಲ್ಲ
flipboard facebook twitter whatsapp