ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಒಂದೇ ವಾರದಲ್ಲಿ 2ನೇ ಬಾರಿ ಗಾಂಜಾ ಜಪ್ತಿ

ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ಪ್ರಕರಣದ ತನಿಖೆ ತೀವ್ರಗೊಂಡಿರುವ ಬೆನ್ನಲ್ಲೇ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ(ಕೆಐಎ) ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಒಂದೇ ವಾರದಲ್ಲಿ ಎರಡನೇ ಬಾರಿ ಗಾಂಜಾ ಜಪ್ತಿ ಮಾಡಿದ್ದಾರೆ.
ಗಾಂಜಾ
ಗಾಂಜಾ

ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ಪ್ರಕರಣದ ತನಿಖೆ ತೀವ್ರಗೊಂಡಿರುವ ಬೆನ್ನಲ್ಲೇ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ(ಕೆಐಎ) ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಒಂದೇ ವಾರದಲ್ಲಿ ಎರಡನೇ ಬಾರಿ ಗಾಂಜಾ ಜಪ್ತಿ ಮಾಡಿದ್ದಾರೆ.

ಅಂತಾರಾಷ್ಟ್ರೀಯ ಕಾರ್ಗೋ ವಿಮಾನದಲ್ಲಿದ್ದ ಗಾಂಜಾವನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.

ಅಧಿಕಾರಿಯೊಬ್ಬರ ಪ್ರಕಾರ, ಖಚಿತ ಮಾಹಿತಿ ಆಧರಿಸಿ, 484 ಗ್ರಾಂ ತೂಕದ ಮತ್ತು 7.78 ಲಕ್ಷ ರೂಪಾಯಿ ಮೌಲ್ಯದ ಗಾಂಜಾವನ್ನು ಫೆಡ್ಎಕ್ಸ್ ಸರಕು ವಿಮಾನದಿಂದ ಜಪ್ತಿ ಮಾಡಿಯಲಾಗಿದೆ. ಕೆನಡಾದಿಂದ ಇದನ್ನು ಸಾಗಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಕಳೆದ ಸೋಮವಾರ ವಾಷಿಂಗ್ಟನ್‌ನಿಂದ ಬೆಂಗಳೂರಿಗೆ ತಲುಪಿದ ಡಿಎಚ್‌ಎಲ್ ವಿಮಾನದಲ್ಲಿದ್ದ ಸುಮಾರು 2 ಕೋಟಿ ರೂಪಾಯಿ ಮೌಲ್ಯದ 8.5 ಕೆಜಿ ಉತ್ತಮ ಗುಣಮಟ್ಟದ ಗಾಂಜಾವನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದರು.

ಈ ಗಾಂಜಾವನ್ನು ಬೆಂಗಳೂರು, ತುಮಕೂರು ಮತ್ತು ಹೈದರಾಬಾದ್‌ನ ಗ್ರಾಹಕರಿಗೆ ನೀಡಲು ಸಾಗಿಸಲಾಗುತ್ತಿತ್ತು.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com