ರಾಷ್ಟ್ರನಿರ್ಮಾಣ ಕಾರ್ಯದಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದು: ಶಿಕ್ಷಕರ ದಿನಾಚರಣೆಗೆ ಶುಭ ಕೋರಿದ ಮುಖ್ಯಮಂತ್ರಿ

ಶಿಕ್ಷಕರ ದಿನಾಚರಣೆ ಅಂಗವಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿ ಅನೇಕ ಗಣ್ಯರು ಶುಭ ಕೋರಿದ್ದಾರೆ.

Published: 05th September 2020 08:50 AM  |   Last Updated: 05th September 2020 08:50 AM   |  A+A-


Yeddyurappa

ಯಡಿಯೂರಪ್ಪ

Posted By : Manjula VN
Source : UNI

ಬೆಂಗಳೂರು: ಶಿಕ್ಷಕರ ದಿನಾಚರಣೆ ಅಂಗವಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿ ಅನೇಕ ಗಣ್ಯರು ಶುಭ ಕೋರಿದ್ದಾರೆ.

ಮುಖ್ಯಮಂತ್ರಿ ಯಡಿಯೂರಪ್ಪ ಟ್ವೀಟ್ ಮಾಡಿ, ನಾಡಿನ ಎಲ್ಲ ಶಿಕ್ಷಕರಿಗೆ 'ಶಿಕ್ಷಕರ ದಿನ'ದ ಹಾರ್ದಿಕ ಶುಭಕಾಮನೆಗಳು. ಮಾಜಿ ರಾಷ್ಟ್ರಪತಿಗಳಾದ ಭಾರತರತ್ನ ಡಾ. ಸರ್ವೆಪಲ್ಲಿ ರಾಧಾಕೃಷ್ಣನ್ ಅವರ ಜಯಂತಿಯಂದು ಅವರ ಸಂಸ್ಮರಣೆಗಳ ಜೊತೆಗೆ ಕೊರೋನಾ ಪರಿಸ್ಥಿತಿಗಳ ವಿಭಿನ್ನ ಸವಾಲುಗಳ ನಡುವೆಯೂ ಕರ್ತವ್ಯನಿಷ್ಠರಾಗಿರುವ ನಮ್ಮ ಶಿಕ್ಷಕರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ತಿಳಿಸಿದ್ದಾರೆ.

ಮತ್ತೊಂದು ಟ್ವೀಟ್‌ನಲ್ಲಿ, ನಾಡಿನ ಎಲ್ಲ ಶಿಕ್ಷಕರಿಗೆ 'ಶಿಕ್ಷಕರ ದಿನ'ದ ಹಾರ್ದಿಕ ಶುಭಾಶಯಗಳು. ಮಾಜಿ ರಾಷ್ಟ್ರಪತಿ ಭಾರತರತ್ನ ಡಾ. ಸರ್ವೆಪಲ್ಲಿ ರಾಧಾಕೃಷ್ಣನ್ ಅವರಿಗೆ ನಮಿಸುತ್ತಾ, ರಾಷ್ಟ್ರನಿರ್ಮಾಣ ಕಾರ್ಯದಲ್ಲಿ, ಶಿಕ್ಷಣದ ಮೂಲಕ ಭವಿಷ್ಯದ ಸಶಕ್ತ ಪ್ರಜೆಗಳನ್ನು ರೂಪಿಸುವ ಮಹತ್ವಪೂರ್ಣ ಪಾತ್ರ ನಿರ್ವಹಿಸುತ್ತಿರುವ ಎಲ್ಲ ನಮ್ಮ ಶಿಕ್ಷಕರಿಗೆ ಗೌರವಪೂರ್ವಕ ಅಭಿನಂದನೆಗಳು ಎಂದು ತಿಳಿಸಿದ್ದಾರೆ.

Stay up to date on all the latest ರಾಜ್ಯ news
Poll
Congress logo

ನಾಯಕತ್ವದ ಕೊರತೆಯಿಂದಾಗಿ ಕಾಂಗ್ರೆಸ್ ಪಕ್ಷ ಒಡಕಿನತ್ತ ಸಾಗುತ್ತಿದೆಯೇ?


Result
ಹೌದು
ಇಲ್ಲ
flipboard facebook twitter whatsapp