ಪರಿಶಿಷ್ಟ ಪಂಗಡಕ್ಕೆ ಶೇ.7.5 ರಷ್ಟು ಮೀಸಲಾತಿ: ನಿಯೋಗದೊಂದಿಗೆ ಶೀಘ್ರ ಮುಖ್ಯಮಂತ್ರಿ ಭೇಟಿ- ಶ್ರೀರಾಮುಲು

ರಾಜ್ಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿರುವ ಪರಿಶಿಷ್ಟರಿಗೆ ಒಳಮೀಸಲಾತಿ ನೀಡುವ  ವಿಚಾರ ಇದೀಗ ತೀವ್ರ ಚರ್ಚೆಗೆ ಕಾರಣವಾಗಿದ್ದು, ನ್ಯಾಯಮೂರ್ತಿ ನಾಗಮೋಹನ್ ದಾಸ್ ನೇತೃತ್ವದ  ಸಮಿತಿ ವರದಿ ಅನುಷ್ಠಾನಕ್ಕೆ ಒತ್ತಡ ಕೇಳಿ ಬಂದಿದೆ. 
ಸಚಿವ ಶ್ರೀರಾಮುಲು ಮತ್ತಿತರರು
ಸಚಿವ ಶ್ರೀರಾಮುಲು ಮತ್ತಿತರರು

ಹರಿಹರ: ರಾಜ್ಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿರುವ ಪರಿಶಿಷ್ಟರಿಗೆ ಒಳಮೀಸಲಾತಿ ನೀಡುವ  ವಿಚಾರ ಇದೀಗ ತೀವ್ರ ಚರ್ಚೆಗೆ ಕಾರಣವಾಗಿದ್ದು, ನ್ಯಾಯಮೂರ್ತಿ ನಾಗಮೋಹನ್ ದಾಸ್ ನೇತೃತ್ವದ  ಸಮಿತಿ ವರದಿ ಅನುಷ್ಠಾನಕ್ಕೆ ಒತ್ತಡ ಕೇಳಿ ಬಂದಿದೆ. 

ಅದರಲ್ಲೂ ಪ್ರಮುಖವಾಗಿ ಪರಿಶಿಷ್ಟ ಪಂಗಡಕ್ಕೆ ಶೇ 7.5 ರಷ್ಟು ಮೀಸಲಾತಿ ಕಲ್ಪಿಸುವ ಕುರಿತು ನ್ಯಾ. ನಾಗಮೋಹನ್ ದಾಸ್ ನೇತೃತ್ವದ ಸಮಿತಿ ನೀಡಿರುವ ವರದಿ ಅನುಷ್ಠಾನಗೊಳಿಸುವಂತೆ ಎಸ್.ಟಿ. ಸಮುದಾಯದ ಮುಖಂಡರು ರಾಜ್ಯದ ಸಚಿವರ ಮೇಲೆ ಒತ್ತಡ ಹೇರುತ್ತಿದ್ದಾರೆ. 

ಈ ಬೆಳವಣಿಗೆ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಆರೋಗ್ಯ ಸಚಿವ ಬಿ. ಶ್ರೀರಾಮುಲು, ಪರಿಶಿಷ್ಟ ಪಂಗಡಕ್ಕೆ ಶೇಕಡ ೭.೫ರಷ್ಟು ಒಳ ಮೀಸಲಾತಿ ದೊರಕಿಸುವ  ಸಂಬಂಧ ಶೀಘ್ರದಲ್ಲೇ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮನವಿ ಮಾಡಲಾಗುವುದು ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com