ಬೆಂಗಳೂರು ಬಳಿಕ ಸಾವಿನ ಸಂಖ್ಯೆಯಲ್ಲಿ 500ರ ಗಡಿ ದಾಟಿದ ಮೈಸೂರು!

ರಾಜ್ಯದಲ್ಲಿ ಕೊರೋನಾ ರೌದ್ರನರ್ತನ ದಿನದಿಂದ ದಿನಕ್ಕೆ ಏರುತ್ತಲೇ ಇದ್ದು, ಮೈಸೂರು ಜಿಲ್ಲೆಯಲ್ಲಿ ಮಹಾಮಾರಿ ಕೊರೋನಾ ಭಾನುವಾರ 5 ಮಂದಿಯನ್ನು ಬಲಿಪಡೆದುಕೊಂಡಿದ್ದು, ಇದರೊಂದಿಗೆ ಬೆಂಗಳೂರು ಬಳಿಕ ಸಾವಿನ ಸಂಖ್ಯೆಯಲ್ಲಿ 500 ಗಡಿ ದಾಟಿದ ಎರಡನೇ ಜಿಲ್ಲೆಯಾಗಿ ಕುಖ್ಯಾತಿ ಪಡೆದುಕೊಂಡಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಮೈಸೂರು: ರಾಜ್ಯದಲ್ಲಿ ಕೊರೋನಾ ರೌದ್ರನರ್ತನ ದಿನದಿಂದ ದಿನಕ್ಕೆ ಏರುತ್ತಲೇ ಇದ್ದು, ಮೈಸೂರು ಜಿಲ್ಲೆಯಲ್ಲಿ ಮಹಾಮಾರಿ ಕೊರೋನಾ ಭಾನುವಾರ 5 ಮಂದಿಯನ್ನು ಬಲಿಪಡೆದುಕೊಂಡಿದ್ದು, ಇದರೊಂದಿಗೆ ಬೆಂಗಳೂರು ಬಳಿಕ ಸಾವಿನ ಸಂಖ್ಯೆಯಲ್ಲಿ 500 ಗಡಿ ದಾಟಿದ ಎರಡನೇ ಜಿಲ್ಲೆಯಾಗಿ ಕುಖ್ಯಾತಿ ಪಡೆದುಕೊಂಡಿದೆ. 

ಮೈಸೂರಿನಲ್ಲಿ ಒಟ್ಟು 503 ಮಂದಿ ಮಹಾಮಾರಿ ವೈರಸ್'ಗೆ ಬಲಿಯಾಗಿದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಸಾವಿನ ಪ್ರಮಾಣ ಶೇ.2.27ಕ್ಕೆ ತಲುಪಿದೆ. ಇದು ರಾಜ್ಯದ ಸರಾಸರಿಗಿಂತ ಹೆಚ್ಚಾಗಿದ್ದು, ಇತರೆ ಜಿಲ್ಲೆಗಳಿಗಿಂತ ಮೈಸೂರು ಹೆಚ್ಚಿನ ಸಾವಿನ ಪ್ರಮಾಣ ಹೊಂದಿದಂತಾಗಿದೆ. 

ಸೋಂಕಿತರು ತಡವಾಗಿ ಆಸ್ಪತ್ರೆಗೆ ದಾಖಲಾಗುತ್ತಿರುವುದರಿಂದ ಹಾಗೂ ನೆರೆ ಜಿಲ್ಲೆಗಳಿಂದ ಮೈಸೂರು ಆಸ್ಪತ್ರೆಗೆ ಬರುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ಸಾವಿನ ಪ್ರಮಾಣ ಏರಿಕೆಯಾಗಿದೆ. ಬಳ್ಳಾರಿಯಲ್ಲಿ 23,800 ಸೋಂಕಿತರು ಪತ್ತೆಯಾಗಿದ್ದು, ಇದು ಮೈಸೂರಿನಲ್ಲಿ ಪತ್ತೆಯಾಗಿರುವ ಸೋಂಕಿತರ ಸಂಖ್ಯೆಗಿಂತ ಹೆಚ್ಚಾಗಿದೆ. ಬಳ್ಳಾರಿಯಲ್ಲಿ ಈ ವರೆಗೂ 294 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಈ ಬೆಳವಣಿಗೆಗಳನ್ನು ಗಮನಿಸಿದರೆ, ಕೊರೋನಾ ನಿಗ್ರಹಿಸುವಲ್ಲಿ ಯಾವುದೇ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳದೇ ಇರುವುದು ಕಂಡು ಬರುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. 

ದೀರ್ಘಕಾಲಿಕ ರೋಗಗಳಿಂದ ಬಳಲುತ್ತಿರುವವರು ಹೆಚ್ಚು ಸಾವಿಗೀಡಾಗುತ್ತಿದ್ದಾರೆ. ದೀರ್ಘಕಾಲಿಕ ರೋಗದಿಂದ ಬಳಲುತ್ತಿರುವವರು ಚಿಕಿತ್ಸೆಗೆ ಶೀಘ್ರಗತಿಯಲ್ಲಿ ಸ್ಪಂದನೆ ನೀಡುವುದಿಲ್ಲ. ಸಾಕಷ್ಟು ಮಂದಿ ಕೊನೆಯ ಗಳಿಗೆಯಲ್ಲಿ ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ. ಹೀಗಾಗಿ ಸಾವಿನ ಪ್ರಮಾಣ ಹೆಚ್ಚಾಗುತ್ತಿದೆ ಎಂದು ತಿಳಿಸಿದ್ದಾರೆ. 

ಮೈಸೂರಿನಲ್ಲಿ ಭಾನುವಾರ ಹೊಸದಾಗಿ 686 ಮಂದಿಗೆ ಸೋಂಕು ತಗುಲಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 22,080ಕ್ಕೆ ಏರಿಕೆಯಾಗಿದೆ. ಕೊರೋನಾದಿಂದ ಗುಣಮುಖರಾಗಿ 435 ಮಂದಿ ಸೋಂಕಿತರು ವಿವಿಧ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಈ ವರೆಗೆ ಒಟ್ಟಾರೆ 14,499 ಮಂದಿ ಆಸ್ಪತ್ರೆಯಿಂದ ಬಿಡುಗಡೆಹೊಂದಿದ್ದು, 7,078 ಸಕ್ರಿಯ ಪ್ರಕರಣಗಳಿವೆ. ಕೊರೋನಾ ಕಾರಣದಿಂದ 5 ಮಂದಿ ಮೃತಪಟ್ಟರೆ,     ಒಟ್ಟಾರೆ 503 ಮಂದಿ ಮೃತಪಟ್ಟಂತಾಗಿದೆ. 

ಇಂದಿನ ಸೋಂಕಿತರ ಪೈಕಿ 396 ಮಂದಿ ಪ್ರಾಥಮಿಕ ಸಂಪರ್ಕದಿಂದ, 114 ಮಂದಿ ಐಎಲ್ಐ ಪ್ರಕರಣ, 29 ಮಂದಿ ಸಾರಿ ಪ್ರಕರಣ ಹಾಗೂ 147 ಮಂದಿ ಪ್ರವಾಸದಿಂದಾಗಿ ಸೋಂಕು ತಗುಲಿದೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com