927 ಕೋಟಿ ರೂ ವೆಚ್ಚದ ಬೆಳಗಾವಿ-ಧಾರವಾಡ ರೈಲು ಯೋಜನೆಗೆ ಅನುಮೋದನೆ: ಸುರೇಶ್ ಅಂಗಡಿ

ಬಹು ವರ್ಷಗಳಿಂದ ನೆನೆ ಗುದಿಗೆ ಬಿದ್ದಿದ್ದ ಬೆಳಗಾವಿ-ಧಾರವಾಡ ರೈಲು ಮಾರ್ಗಕ್ಕೆ ಕೇಂದ್ರ ಸರ್ಕಾರ ಹಸಿರು ನಿಶಾನೆ ತೋರಿದ್ದು, ಈ ಮೂಲಕ ಮುಂಬೈ ಕರ್ನಾಟಕ ಭಾಗದ ಜನರ ಕನಸು ನನಸಾಗುವ ಕಾಲ ಸನ್ನಿಹಿತವಾಗಿದೆ.
ಸುರೇಶ್ ಅಂಗಡಿ
ಸುರೇಶ್ ಅಂಗಡಿ

ಬೆಳಗಾವಿ: ಬಹು ವರ್ಷಗಳಿಂದ ನೆನೆ ಗುದಿಗೆ ಬಿದ್ದಿದ್ದ ಬೆಳಗಾವಿ-ಧಾರವಾಡ ರೈಲು ಮಾರ್ಗಕ್ಕೆ ಕೇಂದ್ರ ಸರ್ಕಾರ ಹಸಿರು ನಿಶಾನೆ ತೋರಿದ್ದು, ಈ ಮೂಲಕ ಮುಂಬೈ ಕರ್ನಾಟಕ ಭಾಗದ ಜನರ ಕನಸು ನನಸಾಗುವ ಕಾಲ ಸನ್ನಿಹಿತವಾಗಿದೆ.

ಬೆಳಗಾವಿ ಯಿಂದ ಕಿತ್ತೂರು ಮಾರ್ಗವಾಗಿ ಧಾರವಾಡಕ್ಕೆ ಸಂಚರಿಸುವ 927.40 ಕೋಟಿ ರೂ ವೆಚ್ಚದ ರೈಲು ಮಾರ್ಗ ಕಾಮಗಾರಿಗೆ ಅನುಮೋದನೆ ನೀಡಲಾಗಿದೆ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ರೈಲು ಬೆಳಗಾವಿ, ದೇಸೂರು, ಎಂ.ಕೆ. ಹುಬ್ಬಳ್ಳಿ, ಹುಲಿಕಟ್ಟೆ, ಜಾಲಿಕೊಪ್ಪ, ಬೇಲೂರು ಕೈಗಾರಿಕಾ ಪ್ರದೇಶದಿಂದ ಧಾರವಾಡಕ್ಕೆ ಕೇವಲ ಒಂದು ಗಂಟೆಯಲ್ಲಿ ತಲುಪುತ್ತದೆ. ಈ ರೈಲು ಯೋಜನೆಯಿಂದ ಈ ಭಾಗದ ಜನರಿಗೆ ಹೆಚ್ಚಿನ ರೀತಿಯಲ್ಲಿ ಅನುಕೂಲವಾಗಲಿದೆ ಎಂದರು. 

ಈ ರೈಲು ಯೋಜನೆ ಅನುಷ್ಠಾನಕ್ಕೆ ರಾಜ್ಯ ಸರ್ಕಾರ  ಶೇಕಡ 50 ರಷ್ಟು ಭೂಮಿ ನೀಡಲಿದ್ದು, ಅನೇಕ ವರ್ಷಗಳ ಈ ಬೇಡಿಕೆಯನ್ನು  ಕಳೆದ ವರ್ಷ ಈಡೇರಿಸುವುದಾಗಿ ಸರ್ಕಾರ ಭರವಸೆ ನೀಡಿತ್ತು. ಅದರಂತೆ ಇದೀಗ ಅನುಮೋದನೆ ನೀಡಲಾಗಿದೆ ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com