ರಾಜ್ಯದಲ್ಲಿ ಇಂದು ಕೊರೋನಾಗೆ 146 ಬಲಿ, ಬೆಂಗಳೂರಿನಲ್ಲಿ 3102 ಸೇರಿ 7866 ಮಂದಿಗೆ ಪಾಸಿಟಿವ್

ರಾಜ್ಯದಲ್ಲಿ ಕೊರೋನಾ ವೈರಸ್ ಅಟ್ಟಹಾಸ ಮುಂದುವರೆದಿದ್ದು, ಮಂಗಳವಾರ ಬರೋಬ್ಬರಿ 7866 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 4,12,190ಕ್ಕೆ ಏರಿಕೆಯಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಅಟ್ಟಹಾಸ ಮುಂದುವರೆದಿದ್ದು, ಮಂಗಳವಾರ ಬರೋಬ್ಬರಿ 7866 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 4,12,190ಕ್ಕೆ ಏರಿಕೆಯಾಗಿದೆ.

ಇನ್ನು ರಾಜ್ಯದಲ್ಲಿ ಇಂದು 146 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 6680ಕ್ಕೆ ಏರಿಕೆಯಾಗಿದೆ.

ಕೊರೋನಾ ವೈರಸ್ ನಿಂದಾಗಿ ಕಳೆದ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ 55 ಸೋಂಕಿತರು ಸೇರಿದಂತೆ ರಾಜ್ಯದಲ್ಲಿ ಒಟ್ಟು 146 ಮಂದಿ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಇಂದು ಬೆಂಗಳೂರು ನಗರವೊಂದರಲ್ಲೆ ಅತಿ ಹೆಚ್ಚು ಅಂದರೆ 3102 ಹೊಸ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಸಿಲಿಕಾನ್ ಸಿಟಿಯ ಸೋಂಕಿತರ ಸಂಖ್ಯೆ 1,53,625ಕ್ಕೆ ಏರಿಕೆಯಾಗಿದೆ.

ಇಂದು 7803 ಮಂದಿ ಆಸ್ಪತ್ಪೆಯಿಂದ ಡಿಸ್ಚಾರ್ಜ್ ಆಗಿದ್ದು, ಗುಣಮುಖರಾದವರ ಸಂಖ್ಯೆ 3,08573ಕ್ಕೆ ಏರಿಕೆಯಾಗಿದೆ. 96,918 ಮಂದಿ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪೈಕಿ 784 ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com