ನಟಿ ಸಂಯುಕ್ತ ಹೆಗ್ಡೆ ಜೊತೆ ಜಗಳ: ಕಾಂಗ್ರೆಸ್ ನಾಯಕಿ ಕವಿತಾ ರೆಡ್ಡಿ ವಿರುದ್ಧ ಎಫ್ ಐ ಆರ್
ಉದ್ಯಾನವನದಲ್ಲಿ ನಟಿ ಸಂಯುಕ್ತಾ ಹೆಗ್ಡೆ ಮತ್ತು ಅವರ ಸ್ನೇಹಿತೆಯರ ಜತೆ ಜಗಳ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕಿ ಕವಿತಾ ರೆಡ್ಡಿ ವಿರುದ್ಧ ವಿವಿಧ ಸೆಕ್ಷನ್‌ಗಳ ಅಡಿ ಪ್ರಕರಣ ದಾಖಲಿಸಲಾಗಿದೆ.
Published: 08th September 2020 12:45 PM | Last Updated: 08th September 2020 12:45 PM | A+A A-

ಕವಿತಾ ರೆಡ್ಡಿ
ಬೆಂಗಳೂರು: ಉದ್ಯಾನವನದಲ್ಲಿ ನಟಿ ಸಂಯುಕ್ತಾ ಹೆಗ್ಡೆ ಮತ್ತು ಅವರ ಸ್ನೇಹಿತೆಯರ ಜತೆ ಜಗಳ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕಿ ಕವಿತಾ ರೆಡ್ಡಿ ವಿರುದ್ಧ ವಿವಿಧ ಸೆಕ್ಷನ್‌ಗಳ ಅಡಿ ಪ್ರಕರಣ ದಾಖಲಿಸಲಾಗಿದೆ.
ಸರ್ಜಾಪುರ ರಸ್ತೆಯ ಅಗರ ಕೆರೆಯ ಉದ್ಯಾನದಲ್ಲಿ ಶುಕ್ರವಾರ ನಡೆದ ಕಿತ್ತಾಟದ ಕುರಿತು ನಟ ಸಂಯುಕ್ತಾ ಹೆಗ್ಡೆ, ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಪಾರ್ಕ್‌ನಲ್ಲಿ ವರ್ಕೌಟ್ ನಡೆಸುತ್ತಿದ್ದ ಸಂಯುಕ್ತಾ ಹೆಗ್ಡೆ ಸರಿಯಾದ ರೀತಿ ಬಟ್ಟೆ ಧರಿಸಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದ್ದ ಕವಿತಾ ರೆಡ್ಡಿ, ಸಂಯುಕ್ತಾ ಸ್ನೇಹಿತೆ ಮೇಲೆ ಹಲ್ಲೆ ನಡೆಸಿದ್ದರು. ಕವಿತಾ ರೆಡ್ಡಿ ವಿರುದ್ಧ ಐಪಿಸಿ ಸೆಕ್ಷನ್‌ಗಳಾದ 323, 504 (b) ಮತ್ತು 506 ಅಡಿ ಎಚ್‌ಎಸ್ಆರ್ ಲೇಔಟ್ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಈ ಘಟನೆ ತೀವ್ರ ವಿವಾದ ಸೃಷ್ಟಿಸಿದ ಬಳಿಕ ಕಾಂಗ್ರೆಸ್ ನಾಯಕಿ ಕವಿತಾ ರೆಡ್ಡಿ ಸಾಮಾಜಿಕ ಜಾಲತಾಣದ ಮೂಲಕ ಸಂಯುಕ್ತಾ ಹೆಗ್ಡೆ ಅವರಲ್ಲಿ ಬಹಿರಂಗ ಕ್ಷಮೆ ಕೋರಿದ್ದಾರೆ. 'ನಾನು ಅನೈತಿಕ ಪೊಲೀಸ್‌ಗಿರಿಯನ್ನು ವಿರೋಧಿಸುವವಳು. ಪ್ರಗತಿಪರ ಮಹಿಳೆ ಹಾಗೂ ಜವಾಬ್ದಾರಿಯುತ ನಾಗರಿಕಳಾಗಿ ಆ ರೀತಿ ವರ್ತಿಸಬಾರದಿತ್ತು. ಇದಕ್ಕಾಗಿ ಸಂಯುಕ್ತಾ ಹೆಗ್ಡೆ ಅವರಲ್ಲಿ ಪ್ರಾಮಾಣಿಕವಾಗಿ ಕ್ಷಮೆ ಕೋರುತ್ತೇನೆ' ಎಂದು ಕವಿತಾ ಹೇಳಿದ್ದರು.