ಕರ್ನಾಟಕದಲ್ಲಿ ಸೆ.10ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಕಳೆದ 2 ದಿನಗಳಿಂದ ಧಾರಾಕಾರ ಮಳೆ ಸುರಿಯುತ್ತಿದೆ. ಉಡುಪಿ, ಶಿವಮೊಗ್ಗ, ರಾಯಚೂರು, ಕೊಡಗಿನಲ್ಲಿ ಮಳೆ ಹೆಚ್ಚಾಗಿದೆ. ಸೆಪ್ಟೆಂಬರ್ 10ರವರೆಗೆ ಕರ್ನಾಟಕದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಕರ್ನಾಟಕದ ಬಹುತೇಕ ಭಾಗಗಳಲ್ಲಿ ಕಳೆದ 2 ದಿನಗಳಿಂದ ಧಾರಾಕಾರ ಮಳೆ ಸುರಿಯುತ್ತಿದೆ. ಉಡುಪಿ, ಶಿವಮೊಗ್ಗ, ರಾಯಚೂರು, ಕೊಡಗಿನಲ್ಲಿ ಮಳೆ ಹೆಚ್ಚಾಗಿದೆ. ಸೆಪ್ಟೆಂಬರ್ 10ರವರೆಗೆ ಕರ್ನಾಟಕದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

ಇಂದಿನಿಂದ ಸೆ. 11ರವರೆಗೆ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಅತ್ಯಧಿಕ ಮಳೆಯಾಗುವ ನಿರೀಕ್ಷೆಯಿದೆ. ಉತ್ತರ ಕರ್ನಾಟಕದ ಜಿಲ್ಲೆಗಳಾದ ಬೆಳಗಾವಿ, ಧಾರಾವಾಡ, ಗದಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಲೆನಾಡಿನ ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು, ಕರಾವಳಿ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರಿನಲ್ಲಿಯೂ ಇನ್ನೆರಡು ದಿನ ಮಳೆಯ ಪ್ರಮಾಣ ಹೆಚ್ಚಾಗಲಿದೆ. ಕರ್ನಾಟಕದ ಮಲೆನಾಡು, ಕರಾವಳಿ, ಉತ್ತರ ಕರ್ನಾಟಕದ ಕೆಲವು ಭಾಗಗಳಲ್ಲಿ ಇಂದಿನಿಂದ 3 ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಹೆಚ್ಚಾಗಿದೆ. ಮಲೆನಾಡು ಮತ್ತು ಕರಾವಳಿಯಲ್ಲಿ ಸೆ. 10ರವರೆಗೂ ಮಳೆ ಮುಂದುವರೆಯುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಮತ್ತು ಆರೆಂಜ್ ಅಲರ್ಟ್ ಘೋಷಿಸಿದೆ. 

ಕರ್ನಾಟಕದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯದಲ್ಲಿ ಇಂದು ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಹೀಗಾಗಿ, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ, ತುಮಕೂರು, ರಾಮನಗರ, ಚಾಮರಾಜನಗರ, ದಕ್ಷಿಣ ಕನ್ನಡ, ಉಡುಪಿ, ಹಾಸನ, ಕೊಡಗು ಜಿಲ್ಲೆಗಳಲ್ಲಿ ಸೆ. 9ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ನಿನ್ನೆ ಶಿವಮೊಗ್ಗದ ತೀರ್ಥಹಳ್ಳಿ ಭಾಗದಲ್ಲಿ ಭಾರೀ ಮಳೆಯಾಗಿದೆ. ಉಡುಪಿಯಲ್ಲಿಯೂ ಮಳೆ ಹೆಚ್ಚಾಗಿದ್ದು, ಕೊಲ್ಲೂರಿನಲ್ಲಿ 240 ಮಿ.ಮೀ. ಮಳೆ ದಾಖಲಾಗಿದೆ. ಕರಾವಳಿಯಲ್ಲಿ ಗಂಟೆಗೆ 40ರಿಂದ 55 ಕಿ.ಮೀ. ವೇಗದಲ್ಲಿ ಗಾಳಿ ಬೀಸುತ್ತಿದೆ. ಇದರಿಂದ ಸಮುದ್ರದ ತೀರಕ್ಕೆ ತೆರಳದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ. ಉತ್ತರ ಕನ್ನಡದ ಕೆಲವು ಭಾಗಗಳಲ್ಲಿಯೂ ಮಳೆ ಹೆಚ್ಚಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com