ಗ್ರಂಥಾಲಯ ಇಲಾಖೆಯಿಂದ 500 ಕನ್ನಡ ಪುಸ್ತಕ ಖರೀದಿಗೆ ಕ್ರಮ: ಸಚಿವ ಸುರೇಶ್ ಕುಮಾರ್

ರಾಜ್ಯ ಗ್ರಂಥಾಲಯ ಇಲಾಖೆಯಿಂದ ವಾರ್ಷಿಕ ಸಗಟು ಖರೀದಿ ಯೋಜನೆಯಡಿ ಇನ್ನು ಮುಂದೆ ಕನ್ನಡ ಪುಸ್ತಕಗಳ 500 ಪ್ರತಿಗಳನ್ನು ಖರೀದಿಸಲು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದೆಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.
ಸುರೇಶ್ ಕುಮಾರ್
ಸುರೇಶ್ ಕುಮಾರ್

ಬೆಂಗಳೂರು: ರಾಜ್ಯ ಗ್ರಂಥಾಲಯ ಇಲಾಖೆಯಿಂದ ವಾರ್ಷಿಕ ಸಗಟು ಖರೀದಿ ಯೋಜನೆಯಡಿ ಇನ್ನು ಮುಂದೆ ಕನ್ನಡ ಪುಸ್ತಕಗಳ 500 ಪ್ರತಿಗಳನ್ನು ಖರೀದಿಸಲು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದೆಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.

ಬುಧವಾರ ರಾಜ್ಯ ಸಾರ್ವಜನಿಕ ಗ್ರಂಥಾಲಯ ನಿರ್ದೇಶನಾಲಯದಲ್ಲಿ ನೂತನ ರಾಜ್ಯ ಗ್ರಂಥಾಲಯ ಪುಸ್ತಕ ಆಯ್ಕೆ ಸಮಿತಿಯ ಪ್ರಥಮ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಬರಹಗಾರರ ಮತ್ತು ಪ್ರಕಾಶಕರ ಸಂಘದ ಕೋರಿಕೆಯಂತೆ ಬಹುದಿನಗಳ ನಿರೀಕ್ಷೆಯಾಗಿದ್ದ ಕನ್ನಡದ 300 ಪ್ರತಿಗಳ ಖರೀದಿಯನ್ನು 500 ಪ್ರತಿಗಳಿಗೆ ಹೆಚ್ಚಿಸಲು ಪರಿಶೀಲಿಸಿ ಅಗತ್ಯ ಕ್ರಮ ವಹಿಸಲಾಗುವುದು ಎಂದರು.

ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಪುಸ್ತಕಗಳ, ಗ್ರಂಥಗಳ ಮಹತ್ವದ ಕುರಿತು ತಿಳಿವಳಿಕೆ ಮೂಡಿಸಿ ಅಧ್ಯಯನದ ಅಭಿರುಚಿ ಬೆಳೆಸಲು ಕ್ರಮ ಕೈಗೊಳ್ಳುವ ಕುರಿತು ಇಲಾಖೆ ಚಿಂತನೆ ನಡೆಸಿದೆ. ಈ ಕುರಿತಂತೆ ನಮ್ಮ ಪುಸ್ತಕ ಸಮಿತಿ ರೂಪುರೇಷೆ ಸಿದ್ಧಪಡಿಸಬೇಕೆಂದು ಮನವಿ ಮಾಡಿದರು. 

ನಮ್ಮ ವಿದ್ಯಾರ್ಥಿಗಳು ಪರೀಕ್ಷೆಗಾಗಿ ಪುಸ್ತಕಗಳನ್ನು ಓದದೇ ವ್ಯಕ್ತಿತ್ವ ವಿಕಸನದ ದೃಷ್ಟಿಯಿಂದ ಓದುವಂತೆ ಅವರನ್ನು ಅಧ್ಯಯನ ಯೋಗ್ಯರನ್ನಾಗಿಸಬೇಕಾದ ಅಗತ್ಯವಿದೆ ಎಂದರು. 

ಓದುಗರಿಗೆ ಹೊಸ ಪುಸ್ತಕಗಳು ದೊರೆಯುವಂತಾಗಲು ಬಾಕಿ ಇರುವ 2018 ಮತ್ತು 2019ನೇ ಸಾಲಿನ ಪುಸ್ತಕಗಳನ್ನು ಖರೀದಿಸಲು ಸರ್ಕಾರದಿಂದ ಅನುದಾನ ನೀಡಲಾಗುವುದು. ಕೋವಿಡ್-19ರ ಆರ್ಥಿಕ ಸಂಕಷ್ಟ ಸ್ಥಿತಿಯನ್ನು ಎದುರಿಸಲು ಲೇಖಕ/ ಪ್ರಕಾಶಕರಿಗೆ 2020—21ನೇ ಸಾಲಿನ ಖರೀದಿ ಬಜೆಟ್ ಮಂಜೂರು ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಸುರೇಶ್ ಕುಮಾರ್ ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com