23 ಜಿಲ್ಲೆಗಳ 130 ತಾಲೂಕುಗಳು ಅತಿವೃಷ್ಠಿ ಪೀಡಿತ ತಾಲೂಕೆಂದು ಸರ್ಕಾರದ ಅಧಿಕೃತ ಘೋಷಣೆ

ಆಗಸ್ಟ್ ತಿಂಗಳಲ್ಲಿ ಸುರಿದ ಅತಿವೃಷ್ಠಿ ಹಾಗೂ ಪ್ರವಾಹ ಹಿನ್ನಲೆಯಲ್ಲಿ ರಾಜ್ಯದ 23 ಜಿಲ್ಲೆಗಳ 130 ತಾಲೂಕುಗಳನ್ನು ಅತಿವೃಷ್ಠಿ ಪೀಡಿತ ತಾಲೂಕುಗಳಿಂದು ರಾಜ್ಯ ಸರ್ಕಾರ ಘೋಷಣೆ ಮಾಡಿ ದೆ.ಈ ಸಂಬಂಧ ಕಂದಾಯ ಇಲಾಖೆ ವಿಪತ್ತು ನಿರ್ವಹಣಾ ಕಾರ್ಯದರ್ಶಿ ಅಧಿಕೃತ ಆದೇಶ ಹೊರಿಡಿಸಿದ್ದಾರೆ.
23 ಜಿಲ್ಲೆಗಳ 130 ತಾಲೂಕುಗಳು ಅತಿವೃಷ್ಠಿ ಪೀಡಿತ ತಾಲೂಕೆಂದು ಸರ್ಕಾರದ ಅಧಿಕೃತ ಘೋಷಣೆ

ಬೆಂಗಳೂರು: ಆಗಸ್ಟ್ ತಿಂಗಳಲ್ಲಿ ಸುರಿದ ಅತಿವೃಷ್ಠಿ ಹಾಗೂ ಪ್ರವಾಹ ಹಿನ್ನಲೆಯಲ್ಲಿ ರಾಜ್ಯದ 23 ಜಿಲ್ಲೆಗಳ 130 ತಾಲೂಕುಗಳನ್ನು ಅತಿವೃಷ್ಠಿ ಪೀಡಿತ ತಾಲೂಕುಗಳಿಂದು ರಾಜ್ಯ ಸರ್ಕಾರ ಘೋಷಣೆ ಮಾಡಿ ದೆ.ಈ ಸಂಬಂಧ ಕಂದಾಯ ಇಲಾಖೆ ವಿಪತ್ತು ನಿರ್ವಹಣಾ ಕಾರ್ಯದರ್ಶಿ ಅಧಿಕೃತ ಆದೇಶ ಹೊರಿಡಿಸಿದ್ದಾರೆ.

ಸರ್ಕಾರದ ಅಧಿಕೃತ ಆದೇಶದಲ್ಲಿ ಮುಂಗಾರು ಋತುವಿನ ಆಗಸ್ಟ್ ತಿಂಗಳಲ್ಲಿ ಸುರಿದ ಮಹಾಮಳೆ ಹಾಗೂ ಮಹಾರಾಷ್ಟ್ರ ರಾಜ್ಯದಲ್ಲಿ ಕೃಷ್ಣ ಕಣಿವೆ ಜಲಾಶಯಗಳು ತುಂಬು ಹರಿದ ಹಿನ್ನಲೆಯಲ್ಲಿ ಉತ್ತರ ಕರ್ನಾಟ ಕದ ಹಲವು ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿತ್ತು.ಅದೇ ವೇಳೆ ಕರಾವಳಿ ಹಾಗೂ ಮಲೆನಾಡಿನ ಜಿಲ್ಲೆಗಳಲ್ಲಿ ಪ್ರವಾಹ ಕಂಡು ಬಂದಿರುವ ಹಿನ್ನಲೆಯಲ್ಲಿ ಅಪಾರ ಪ್ರಮಾಣದ ಜೀವ ಹಾನಿ,ಮನೆ ಹಾನಿ, ಬೆಳೆ ಹಾನಿ ಹಾಗೂ ಸಾರ್ವಜನಿಕ ಮೂಲಸೌಕರ್ಯಗಳು ಹಾನಿಯಾಗಿದೆ.ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯನ್ನು ಆಧರಿಸಿ ಆಗಸ್ಟ್ 2020ರ ತಿಂಗಳಲ್ಲಿ ಅತಿವೃಷ್ಟಿ/ಪ್ರವಾಹ ಪೀಡಿತವಾಗ 23 ಜಿಲ್ಲೆಗಳ 130 ತಾಲೂಕುಗಳನ್ನು ಅತಿವೃಷ್ಠಿ/ಪ್ರವಾಹ ಪೀಡಿತ ತಾಲೂಕುಗಳೆಂದು ಘೋಷಿಸಿ ಆದೇಶಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com