ಬೆಂಗಳೂರು ಪೊಲೀಸರ ಬೃಹತ್ ಕಾರ್ಯಾಚರಣೆ; ಸುರಂಗದೊಳಗೆ ಅಡಗಿಸಿಟ್ಟಿದ್ದ 1 ಟನ್ ಗೂ ಅಧಿಕ ಗಾಂಜಾ ವಶ; ನಾಲ್ವರ ಬಂಧನ

ಡ್ರಗ್ ವಿರುದ್ಧ ಬೆಂಗಳೂರು ನಗರ ಪೊಲೀಸರು ಸಮರ ಮುಂದುವರಿಸಿದ್ದು, ಕೇಂದ್ರ ವಿಭಾಗದ ಪೊಲೀಸರು ನಡೆಸಿದ ಬೃಹತ್ ಕಾರ್ಯಾಚರಣೆಯಲ್ಲಿ ಸುರಂಗದೊಳಗೆ ಅಡಗಿಸಿಟ್ಟಿದ್ದ 1 ಟನ್ 350 ಕೆ.ಜಿ, 300 ಗ್ರಾಂ ತೂಕದ ಗಾಂಜಾವನ್ನು ಪೊಲೀಸರು ಜಪ್ತಿ ಮಾಡಿ, ನಾಲ್ವರು ಕುಖ್ಯಾತ ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ತಿಳಿಸಿದ್ದಾರೆ.
ಗಾಂಜಾ ವಶಕ್ಕೆ ಪಡೆದ ಪೊಲೀಸರು
ಗಾಂಜಾ ವಶಕ್ಕೆ ಪಡೆದ ಪೊಲೀಸರು

ಬೆಂಗಳೂರು: ಡ್ರಗ್ ವಿರುದ್ಧ ಬೆಂಗಳೂರು ನಗರ ಪೊಲೀಸರು ಸಮರ ಮುಂದುವರಿಸಿದ್ದು, ಕೇಂದ್ರ ವಿಭಾಗದ ಪೊಲೀಸರು ನಡೆಸಿದ ಬೃಹತ್ ಕಾರ್ಯಾಚರಣೆಯಲ್ಲಿ ಸುರಂಗದೊಳಗೆ ಅಡಗಿಸಿಟ್ಟಿದ್ದ 1 ಟನ್ 350 ಕೆ.ಜಿ, 300 ಗ್ರಾಂ ತೂಕದ ಗಾಂಜಾವನ್ನು ಪೊಲೀಸರು ಜಪ್ತಿ ಮಾಡಿ, ನಾಲ್ವರು ಕುಖ್ಯಾತ ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವೃತ್ತಿಯಲ್ಲಿ ಆಟೋ ಚಾಲಕನಾಗಿರುವ ಗಾಯತ್ರಿನಗರ ನಿವಾಸಿ ಜ್ಞಾನಶೇಖರ್ (37), ವಿಜಯಪುರ ಜಿಲ್ಲೆಯ ಸಿಂಧಗಿ ತಾಲೂಕಿನ ಸಿದ್ದುನಾಥ ಲಾವಟೆ (22), ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ನಾಗನಾಥ (39), ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಚಂದ್ರಕಾಂತ್ (34) ಬಂಧಿತ ಆರೋಪಿಗಳು. 

ಆರೋಪಿಗಳ ಪೈಕಿ ಜ್ಞಾನಶೇಖರ್ ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದ. ಸಿದ್ದುನಾಥ ಲಾವಟೆ ಎಸ್ಎಸ್ ಎಲ್ ಎಸ್ ಕಲಿತಿದ್ದು, 30 ಎಕರೆಗೂ ಅಧಿಕ ಜಮೀನು ಹೊಂದಿದ್ದಾನೆ. ಈತ ಆಂಧ್ರಪ್ರದೇಶದಿಂದ ಗಾಂಜಾ ತರಿಸಿಕೊಂಡು ಮುಂಬೈ, ಬೆಂಗಳೂರು ಸೇರಿದಂತೆ ವಿವಿಧ ಕಡೆಯ ಗ್ರಾಹಕರಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದ. ನಾಗನಾಥ್ ಎಸ್ ಎಸ್ ಎಲ್ ಸಿ ಕಲಿತಿದ್ದು, ಬಟ್ಟೆ ಅಂಗಡಿ ಮತ್ತು ಫೈನಾನ್ಸ್ ವ್ಯವಹಾರ ಮಾಡುತ್ತಿದ್ದ. ಲಾಕ್ ಡೌನ್ ವೇಳೆ ನಷ್ಟ ಉಂಟಾಗಿದ್ದರಿಂದ ಡ್ರಗ್ಸ್ ನತ್ತ ಮುಖ ಮಾಡಿದ್ದ. 

ಆಂಧ್ರಪ್ರದೇಶ, ತೆಲಂಗಾಣದಿಂದ ಗಾಂಜಾ ತರಿಸಿಕೊಂಡು ಮಾರಾಟ ಮಾಡುತ್ತಿದ್ದ. ಆರೋಪಿ ಚಂದ್ರಕಾಂತ್ 7ನೇ ತರಗತಿವರೆಗೆ ಕಲಿತಿದ್ದು, ಊರಲ್ಲಿ ವ್ಯವಸಾಯ ಮಾಡಿಕೊಂಡಿದ್ದ. ಕುರಿ ಸಾಕಾಣಿಗೆ ಮಾಡಿಕೊಂಡಿದ್ದ ಈತ ಕಳೆದ ನಾಲ್ಕೈದು ವರ್ಷಗಳಿಂದ ಗಾಂಜಾ ವ್ಯವಹಾರ ಮಾಡುತ್ತಿದ್ದ. ಒಡಿಸ್ಸಾ ಮತ್ತು ಆಂಧ್ರದಿಂದ ಹೆಚ್ಚಿನ ಪ್ರಮಾಣದಲ್ಲಿ ಗಾಂಜಾ ತರಿಸುತ್ತಿದ್ದ ಎಂದು ಪೊಲೀಸ್ ಆಯುಕ್ತರು ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com