ಕೊರೊನಾ ಸೋಂಕು ಗೆದ್ದು ಪ್ಲಾಸ್ಮಾ ದಾನಕ್ಕೆ ಮುಂದಾದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮನೋಜ್ ಕುಮಾರ್

ಕೊರೊನಾ ಮಹಾಮಾರಿಯಿಂದ ಚಾಮರಾಜನಗರ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮನೋಜ್ ಕುಮಾರ್ ಸಂಪೂರ್ಣ ಗುಣಮುಖರಾಗಿ ಈಗ ಪ್ಲಾಸ್ಮಾ ದಾನಕ್ಕೆ ಮುಂದಾಗಿದ್ದಾರೆ.
ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮನೋಜ್ ಕುಮಾರ್
ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮನೋಜ್ ಕುಮಾರ್

ಚಾಮರಾಜನಗರ: ಕೊರೊನಾ ಮಹಾಮಾರಿಯಿಂದ ಚಾಮರಾಜನಗರ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮನೋಜ್ ಕುಮಾರ್ ಸಂಪೂರ್ಣ ಗುಣಮುಖರಾಗಿ ಈಗ ಪ್ಲಾಸ್ಮಾ ದಾನಕ್ಕೆ ಮುಂದಾಗಿದ್ದಾರೆ.

ಕೊರೊನಾ ವಿರುದ್ಧ ಹೋರಾಡುತ್ತಿರುವ ಹಲವು ರೋಗಿಗಳಿಗೆ ನೆರವಾಗಲೆಂದು ಪ್ಲಾಸ್ಮಾ ದಾನ ಮಾಡಲು ಮುಂದಾಗಿದ್ದೇನೆ. ಈ ಕುರಿತು ಆರೋಗ್ಯ ಇಲಾಖೆಗೆ ಮಾಹಿತಿ ನೀಡಿದ್ದೇನೆ‌, ಚಾಮರಾಜನಗರ ಆರೋಗ್ಯ ಇಲಾಖೆ ಸಿಬ್ಬಂದಿಯೂ ಉತ್ತಮವಾಗಿ ಸ್ಪಂದಿಸಿದ್ದಾರೆ ಎಂದರು. ನೆಗಡಿ, ಮೈ-ಕೈ ನೋವಿದ್ದ ಕಾರಣ  ಕೋವಿಡ್ ಟೆಸ್ಟ್ ಮಾಡಿಸಿದ ವೇಳೆ ಮನೋಜ್ ಕುಮಾರ್ ಹಾಗೂ ಅವರ ಪತ್ನಿ, ಮಗನಿಗೂ ಸೋಂಕು ಇರುವುದು ದೃಢಪಟ್ಟಿತ್ತು. ಬಳಿಕ ಹೋಂ ಐಸೋಲೇಷನ್​​​​​ನಲ್ಲೇ ಇದ್ದು ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆ ಪಡೆದು 9 ದಿನಕ್ಕೆ ಕೋವಿಡ್​ನಿಂದ ಗುಣಮುಖರಾಗಿದ್ದಾರೆ.

ಈ ಕುರಿತು  ಮನೋಜ್ ಕುಮಾರ್  ಮಾಧ್ಯಮಗಳೊಂದಿಗೆಪ್ರತಿಕ್ರಿಯಿಸಿದ್ದು, ಹೋಂ ಐಸೋಲೇಷನ್​ನಲ್ಲಿದ್ದು ಗುಣಮುಖರಾಗಿದ್ದೇವೆ, ರೋಗ ಲಕ್ಷಣಗಳನ್ನು ಯಾರೂ ನಿರ್ಲಕ್ಷಿಸಬಾರದು, ಒಂದು ವೇಳೆ ನಿರ್ಲಕ್ಷಿಸಿದರೆ ವೈದ್ಯರು ಅಸಹಾಯಕರಾಗುತ್ತಾರೆ. ಹೋಂ ಐಸೋಲೇಷನ್​​ನಲ್ಲಿದ್ದುಕೊಂಡೆ ಗುಣಮುಖರಾಗಬಹುದು,  ಒಂದು ವೇಳೆ ಸೋಂಕು ದೃಢವಾದರೂ ಧೈರ್ಯಗೆಡಬಾರದು ಎಂದಿದ್ದಾರೆ.ಇದೇ ವೇಳೆ ಕೊರೊನಾ ವಿರುದ್ಧ ಹೋರಾಡುತ್ತಿರುವ ಹಲವು ರೋಗಿಗಳಿಗೆ ನೆರವಾಗಲೆಂದು ಪ್ಲಾಸ್ಮಾ ದಾನ ಮಾಡಲು ಮುಂದಾಗಿದ್ದೇನೆ. ಈ ಕುರಿತು ಆರೋಗ್ಯ ಇಲಾಖೆಗೆ ಮಾಹಿತಿ ನೀಡಿದ್ದೇನೆ‌, ಚಾಮರಾಜನಗರ ಆರೋಗ್ಯ ಇಲಾಖೆ  ಸಿಬ್ಬಂದಿಯೂ ಉತ್ತಮವಾಗಿ ಸ್ಪಂದಿಸಿದ್ದಾರೆ ಎಂದರು.

ವರದಿ ಗುಳಿಪುರ ನಂದೀಶ ಎಂ

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com