ಎಲ್ಲಾ ಮನೆಗಳಿಗೆ ಶುದ್ಧ ಕುಡಿವ ನೀರು ಪೂರೈಕೆ: ಡಿಸಿಎಂ ಡಾ.ಅಶ್ವತ್ಥ ನಾರಾಯಣ

ಲಭ್ಯವಿರುವ ಜಲ ಮೂಲಗಳಿಂದ ಶಾಶ್ವತ ಶುದ್ಧ ಕುಡಿಯುವ ನೀರನ್ನು ಜಿಲ್ಲೆಯಲ್ಲಿರುವ ಗ್ರಾಮೀಣ ಭಾಗದ ಎಲ್ಲಾ ಮನೆಗಳಿಗೂ ಪೂರೈಸಲಾಗುವುದು ಎಂದು ಉಪಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಅವರು ಶುಕ್ರವಾರ ಹೇಳಿದ್ದಾರೆ.
ಡಿಸಿಎಂ ಅಶ್ವಥ ನಾರಾಯಣ
ಡಿಸಿಎಂ ಅಶ್ವಥ ನಾರಾಯಣ

ರಾಮನಗರ: ಲಭ್ಯವಿರುವ ಜಲ ಮೂಲಗಳಿಂದ ಶಾಶ್ವತ ಶುದ್ಧ ಕುಡಿಯುವ ನೀರನ್ನು ಜಿಲ್ಲೆಯಲ್ಲಿರುವ ಗ್ರಾಮೀಣ ಭಾಗದ ಎಲ್ಲಾ ಮನೆಗಳಿಗೂ ಪೂರೈಸಲಾಗುವುದು ಎಂದು ಉಪಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಅವರು ಶುಕ್ರವಾರ ಹೇಳಿದ್ದಾರೆ.

ರಾಮನಗರ ಜಿಲ್ಲೆಗೆ ಶಾಶ್ವತ ಕುಡಿಯುವ ನೀರನ್ನು ಪೂರೈಸುವಂಥ ಯೋಜನೆಗಳಿಗೆ ಸಂಬಂಧಿಸಿದಂತೆ ಅವರು ಇಂದು ಮಂಡ್ಯ ಮತ್ತು ರಾಮನಗರ ಜಿಲ್ಲೆಗಳಲ್ಲಿರುವ ಜಲಮೂಲಗಳು ಮತ್ತು ಕಾಮಗಾರಿ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.

ಡಿಸಿಎಂ ಅಶ್ವತ್ಥ ನಾರಾಯಣ ಅವರು ಇಂದು ಬೆಳಗ್ಗೆ ಮಂಡ್ಯ ಜಿಲ್ಲೆಯ ಮಳ್ಳವಳ್ಳಿ ತಾಲ್ಲೂಕಿನ ಸತ್ತೇಗಾಲ ಗ್ರಾಮದಲ್ಲಿರುವ ಸುರಂಗ ಮಾರ್ಗಕ್ಕೆ ಭೇಟಿ ನೀಡಿ ಪರಿಶೀಲಿಸಿದರು.ನೆಟ್ಕಲ್ ಗ್ರಾಮದ ಪೈಪ್ ಯಾರ್ಡ್ ಪ್ರದೇಶಕ್ಕೂ ತೆರಳಿ ಕಾ ಮಗಾರಿಗಳನ್ನು ವೀಕ್ಷಿಸಿದರು. ನಂತರ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನ ಇಗ್ಲೂರು ಗ್ರಾಮದ ಲ್ಲಿರುವ ಕಣ್ವ ಜಲಾಶಯವನ್ನು ವೀಕ್ಷಿಸಿದರು.

ಕಣ್ವ ಜಲಾಶಯದ ಸಮೀಪ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್ ಮತ್ತು ಅತಿವೃಷ್ಠಿಯ ನಡುವೆಯೂ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಕುಂಟಿತಗೊಂಡಿಲ್ಲ. ಅಭಿವೃದ್ಧಿ ಕಾರ್ಯಗಳು ನಿರಂತರವಾಗಿ ಸಾಗುತ್ತಿವೆ. ಇದಕ್ಕೆ ನಿದರ್ಶನ ಎನ್ನುವಂತೆ ಜಿಲ್ಲೆಯ ಗ್ರಾಮೀಣ ಭಾಗದಲ್ಲಿರುವ ಎಲ್ಲಾ ಮನೆಗಳಿಗೂ ಶುದ್ಧ ನೀರನ್ನು ಪೂರೈಸುವ 250 ಕೋಟಿ ರೂ.ಗಳಿಗೂ ಅಧಿಕ ಮೊತ್ತದ ಕಾಮಗಾರಿಗಳು ಪೂರ್ಣಪ್ರಮಾಣದಲ್ಲಿ ನಡೆಯುತ್ತಿರುವುದೇ ಸಾಕ್ಷಿಯಾಗಿವೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com