ರಾಷ್ಟ್ರೀಯ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿ ಪ್ರವೇಶ ಪರೀಕ್ಷೆಗೆ ತಡೆಯಾಜ್ಞೆ ನೀಡಲು ಸುಪ್ರೀಂ ನಕಾರ

ಬೆಂಗಳೂರಿನ ರಾಷ್ಟ್ರೀಯ ಲಾ ಸ್ಕೂಲ್‌ ಆಫ್‌ ಇಂಡಿಯಾ ಯೂನಿವರ್ಸಿಟಿ ಶನಿವಾರ  ಆಯೋಜಿಸಿರುವ ಪ್ರವೇಶ ಪರೀಕ್ಷೆಗಳಿಗೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್‌  ಶುಕ್ರವಾರ ನಿರಾಕರಿಸಿದೆ. 
ಎನ್ ಎಸ್ ಎಲ್ ಐಯು
ಎನ್ ಎಸ್ ಎಲ್ ಐಯು

ನವದೆಹಲಿ: ಬೆಂಗಳೂರಿನ ರಾಷ್ಟ್ರೀಯ ಲಾ ಸ್ಕೂಲ್‌ ಆಫ್‌ ಇಂಡಿಯಾ ಯೂನಿವರ್ಸಿಟಿ ಶನಿವಾರ  ಆಯೋಜಿಸಿರುವ ಪ್ರವೇಶ ಪರೀಕ್ಷೆಗಳಿಗೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್‌  ಶುಕ್ರವಾರ ನಿರಾಕರಿಸಿದೆ.

 ರಾಷ್ಟ್ರೀಯ ಕಾನೂನು ಆಪ್ಟಿಟ್ಯೂಡ್ ಪರೀಕ್ಷೆಯನ್ನು ಎನ್ ಎಲ್ ಎಸ್ ಐಯು ನಾಳೆ ನಡೆಸಲು ಸುಪ್ರೀಂಕೋರ್ಟ್ ಅವಕಾಶ ಮಾಡಿಕೊಟ್ಟಿದೆ.

ನ್ಯಾಯಮೂರ್ತಿ ಅಶೋಕ್‌ ಭೂಷಣ್‌ ನೇತೃತ್ವದ ನ್ಯಾಯಪೀಠ, ಕೊನೆಯ ಕ್ಷಣದಲ್ಲಿ ಪರೀಕ್ಷೆಯನ್ನು ಮುಂದೂಡಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟಿತು.

ವಿವಿ ಪರೀಕ್ಷೆ ನಡೆಸಬಹುದು. ಆದರೆ, ಫಲಿತಾಂಶ ಪ್ರಕಟಿಸುವಂತಿಲ್ಲ. ಯಾವುದೇ ದಾಖಲಾತಿಗಳನ್ನು ನಡೆಸುವಂತಿಲ್ಲ ಎಂದು ನ್ಯಾಯಪೀಠ ಸ್ಪಷ್ಟಪಡಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com