ಮಂಡ್ಯದ ಅರ್ಕೇಶ್ವರ ದೇವಾಲಯದ ಮೂವರು ಅರ್ಚಕರ ಬರ್ಬರ ಹತ್ಯೆ; ಹುಂಡಿಯ ಹಣ ಕಳವು

ಮಂಡ್ಯದ ಶ್ರೀಅರ್ಕೇಶ್ವರ ದೇವಾಲಯದ ಪ್ರಾಂಗಣದಲ್ಲಿ ಮಲಗಿದ್ದ ಮೂವರು ಅರ್ಚಕರನ್ನು ಹತ್ಯೆ ಮಾಡಿ ಹುಂಡಿಯ ಹಣವನ್ನು ದೋಚಿರುವ ಪ್ರಕರಣ ಇಂದು ಬೆಳಗ್ಗಿನ ಜಾವ ನಡೆದಿದೆ.

Published: 11th September 2020 10:41 AM  |   Last Updated: 11th September 2020 10:41 AM   |  A+A-


Posted By : Raghavendra Adiga
Source : UNI

ಮಂಡ್ಯ: ಮಂಡ್ಯದ ಶ್ರೀಅರ್ಕೇಶ್ವರ ದೇವಾಲಯದ ಪ್ರಾಂಗಣದಲ್ಲಿ ಮಲಗಿದ್ದ ಮೂವರು ಅರ್ಚಕರನ್ನು ಹತ್ಯೆ ಮಾಡಿ ಹುಂಡಿಯ ಹಣವನ್ನು ದೋಚಿರುವ ಪ್ರಕರಣ ಇಂದು ಬೆಳಗ್ಗಿನ ಜಾವ ನಡೆದಿದೆ.

ಮಂಡ್ಯದ ಗುತ್ತಲು ಎಂಬಲ್ಲಿನ ನಿವಾಸಿಗಳಾದ ಗಣೇಶ್ (35), ಪ್ರಕಾಶ್ (36) ಮತ್ತು ಆನಂದ್ (33) ಹತ್ಯೆಯಾದ ಅರ್ಚಕರು. ಅವರು ದೇವಾಲಯದ ಅರ್ಚಕರು ಮತ್ತು ಕಾವಲುಗಾರರಾಗಿ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ದೇವರ ಪೂಜೆಯ ಉಸ್ತುವಾರಿ ಜೊತೆಗೆ ದೇವಾಲಯದ ಕಾವಲು ಕಾಯುತ್ತಿದ್ದರು. ಅರಕೇಶ್ವರ ದೇವಾಲಯ ಮುಜರಾಯಿ ಇಲಾಖೆಗೆ ಸೇರಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ತೀವ್ರ ಶೋಧ ಆರಂಭಿಸಿದ್ದಾರೆ.

ಈ ಮೂವರು ರಾತ್ರಿ ಗೋಪುರ ಮುಖ್ಯದ್ವಾರದ ಬಾಗಿಲಿನ ಚಿಲಕವನ್ನು ಒಳಗಿನಿಂದ ಹಾಕಿಕೊಂಡು ಮಲಗಿದ್ದರು. ಉತ್ತರ ದಿಕ್ಕಿನ ಕಾಂಪೌಂಡ್ ಪಕ್ಕದಲ್ಲಿರುವ ಮರವನ್ನೇರಿ ದೇವಾಲಯದ ಒಳಗೆ ಪ್ರವೇಶಿಸಿರುವ ದರೋಡೆಕೋರರು ಮೂವರನ್ನು ಹತ್ಯೆ ಮಾಡಿ ನಂತರ ಹುಂಡಿ ಹೊಡೆದಿದ್ದಾರೆ. ಅದರಲ್ಲಿದ್ದ ಹಣವನ್ನು ತೆಗೆದುಕೊಂಡು ಹುಂಡಿಯನ್ನು ಕಲ್ಯಾಣಿ ಸಮೀಪದ ಸ್ನಾನದ ಮನೆ ಬಳಿ ಬಿಸಾಡಿ ಪರಾರಿಯಾಗಿದ್ದಾರೆ.

ಘಟನೆ ಸಂಬಂಧ ಮಂಡ್ಯದ ಪೂರ್ವಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Stay up to date on all the latest ರಾಜ್ಯ news
Poll
RBI

ಕಾರ್ಪೊರೇಟ್‌ ಕಂಪನಿಗಳಿಗೆ ಬ್ಯಾಂಕ್‌ ಆರಂಭಿಸಲು ಅನುಮತಿಸುವಂತೆ ಕೇಂದ್ರ ಸರ್ಕಾರಕ್ಕೆ ಆರ್ ಬಿಐ ನೀಡಿರುವ ಸಲಹೆಯನ್ನು ಸ್ವಾಗತಿಸುತ್ತೀರಾ?


Result
ಹೌದು
ಇಲ್ಲ
ಗೊತ್ತಿಲ್ಲ
flipboard facebook twitter whatsapp