ಕರ್ನಾಟಕಕ್ಕೆ ಕೊರೋನಾಘಾತ: ಬೆಂಗಳೂರಿನಲ್ಲಿ 3,552 ಸೇರಿದಂತೆ ರಾಜ್ಯದಲ್ಲಿ 9,140 ಮಂದಿಗೆ ಪಾಸಿಟಿವ್!

ರಾಜ್ಯದಲ್ಲಿ ಕೊರೋನಾ ವೈರಸ್ ಅಟ್ಟಹಾಸ ಮುಂದುವರೆಸಿದೆ. ಇಂದು 9,140 ಮಂದಿ ಕೊರೋನಾಗೆ ತುತ್ತಾಗಿದ್ದರೆ 9,557 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಅಟ್ಟಹಾಸ ಮುಂದುವರೆಸಿದೆ. ಇಂದು 9,140 ಮಂದಿ ಕೊರೋನಾಗೆ ತುತ್ತಾಗಿದ್ದರೆ 9,557 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. 

ಕಳೆದ 24 ಗಂಟೆಗಳಲ್ಲಿ 9,140 ಹೊಸ ಪ್ರಕರಣಗಳು ವರದಿಯಾಗಿದ್ದು, 94 ಮಂದಿ ಮೃತಪಟ್ಟಿದ್ದಾರೆ. ಇದರಿಂದ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 4,49,551ಕ್ಕೇರಿಕೆಯಾಗಿದೆ.

ಇನ್ನು ರಾಜ್ಯದಲ್ಲಿ ಇಂದು 94 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 7,161ಕ್ಕೆ ಏರಿಕೆಯಾಗಿದೆ.

ಕೊರೋನಾ ವೈರಸ್ ನಿಂದಾಗಿ ಕಳೆದ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ 21 ಸೋಂಕಿತರು ಸೇರಿದಂತೆ ರಾಜ್ಯದಲ್ಲಿ ಒಟ್ಟು 94 ಮಂದಿ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಇಂದು ಬೆಂಗಳೂರು ನಗರವೊಂದರಲ್ಲೆ ಅತಿ ಹೆಚ್ಚು ಅಂದರೆ 3,552 ಹೊಸ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಸಿಲಿಕಾನ್ ಸಿಟಿಯ ಸೋಂಕಿತರ ಸಂಖ್ಯೆ 1,67,183ಕ್ಕೆ ಏರಿಕೆಯಾಗಿದೆ.

ಇಂದು 9,557 ಮಂದಿ ಆಸ್ಪತ್ಪೆಯಿಂದ ಡಿಸ್ಚಾರ್ಜ್ ಆಗಿದ್ದು, ಗುಣಮುಖರಾದವರ ಸಂಖ್ಯೆ 3,44,556ಕ್ಕೆ ಏರಿಕೆಯಾಗಿದೆ. 97,815 ಮಂದಿ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪೈಕಿ 795 ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com