ದಸರಾ ಕಾರ್ಯಕಾರಿ ಸಮಿತಿ ಸಭೆ
ದಸರಾ ಕಾರ್ಯಕಾರಿ ಸಮಿತಿ ಸಭೆ

ದಸರಾ ಅರಮನೆ ಆವರಣಕ್ಕೆ ಮಾತ್ರ ಸೀಮಿತ: ಗಜ ಪಯಣ ಸಮಾರಂಭ ಇಲ್ಲ, ಕಾರ್ಯಕಾರಿ ಸಮಿತಿ ಸಭೆಯಲ್ಲಿ ತೀರ್ಮಾನ

ಮೈಸೂರು ದಸರಾ ಮಹೋತ್ಸವ 2020ರ ಅಂಗವಾಗಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರ ಅಧ್ಯಕ್ಷತೆಯಲ್ಲಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವಸಿ.ಟಿ.ರವಿ ಅವರ ಉಪಸ್ಥಿತಿಯಲ್ಲಿ ಶನಿವಾರ ಮೈಸೂರಿನಲ್ಲಿ ದಸರಾ ಕಾರ್ಯಕಾರಿ ಸಮಿತಿ ಸಭೆ ನಡೆಯಿತು.

ಮೈಸೂರು: ಮೈಸೂರು ದಸರಾ ಮಹೋತ್ಸವ 2020ರ ಅಂಗವಾಗಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರ ಅಧ್ಯಕ್ಷತೆಯಲ್ಲಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವಸಿ.ಟಿ.ರವಿ ಅವರ ಉಪಸ್ಥಿತಿಯಲ್ಲಿ ಶನಿವಾರ ಮೈಸೂರಿನಲ್ಲಿ ದಸರಾ ಕಾರ್ಯಕಾರಿ ಸಮಿತಿ ಸಭೆ ನಡೆಯಿತು.

ಕೋವಿಡ್  ಹಿನ್ನೆಲೆಯಲ್ಲಿ ಈ ಬಾರಿಯ ದಸರಾ ಮಹೋತ್ಸವ ಸರಳ ಹಾಗೂ ಸಾಂಪ್ರದಾಯಿಕವಾಗಿ ಚಾಮುಂಡಿ ಬೆಟ್ಟ ಹಾಗೂ ಅರಮನೆ ಆವರಣಕ್ಕೆ ಮಾತ್ರ ಸೀಮಿತವಾಗಿರುತ್ತದೆ. ಬರುವ ಅಕ್ಟೋಬರ್ 2 ರಂದು ಮಧ್ಯಾಹ್ನ 12:18 ಗಂಟೆಗೆ ದಸರಾ ಗಜಪಡೆ ಸ್ವಾಗತ ಕಾರ್ಯಕ್ರಮ ಮೈಸೂರು ಅರಮನೆ ಆವರಣದಲ್ಲಿ ಏರ್ಪಡಿಸಲಾಗಿದೆ. 

ಈ ಹಿಂದೆ ವೀರನ ಹೊಸಹಳ್ಳಿಯಲ್ಲಿ ಆಯೋಜಿಸುತ್ತಿದ್ದ ಗಜಪಯಣ ಸಮಾರಂಭ ಇರುವುದಿಲ್ಲ. ನೇರವಾಗಿ ಮೈಸೂರು ಅರಮನೆ ಆವರಣಕ್ಕೆ ಗಜಪಡೆಯ ಆಗಮನವಾಗಲಿದೆ ಎಂದು ಸೋಮಶೇಖರ್ ತಿಳಿಸಿದರು.

ಈ ಬಾರಿ‌ ಕೊರೊನಾ ವಾರಿಯರ್ಸ್ ಗಳಿಂದ ಚಾಮುಂಡಿ ಬೆಟ್ಟದಲ್ಲಿ ದಸರಾ ಮಹೋತ್ಸವ ಉದ್ಘಾಟನೆಯಾಗಲಿದೆ. ಐವರು ಕೊರೊನಾ ವಾರಿಯರ್ಸ್ ಗಳ ಪೈಕಿ ಒಬ್ಬರು ದಸರಾ ಉದ್ಘಾಟನೆ ಮಾಡಲಿದ್ದು, ಉಳಿದವರಿಗೆ ಸನ್ಮಾನ ಮಾಡಲಾಗುತ್ತದೆ. ಈ ಸನ್ಮಾನಿತರ ಪಟ್ಟಿಯಲ್ಲಿ ಕೋವಿಡ್ ಶವ ಸಂಸ್ಕಾರ ಮಾಡಿದ ವ್ಯಕ್ತಿಯನ್ನು ಸೇರಿಸಿಕೊಳ್ಳುವ ಬಗ್ಗೆ ಪ್ರಸ್ತಾಪ‌ಬಂದಿದೆ ಎಂದು ಹೇಳಿದರು.

2020ರ ಅಕ್ಟೋಬರ್ 17 ರಂದು  ಬೆಳಿಗ್ಗೆ 7:45 ರಿಂದ 8:15 ರೊಳಗಿನ ಶುಭ ಮುಹೂರ್ತದಲ್ಲಿ ಈ ಬಾರಿಯ ದಸರಾ ಮಹೋತ್ಸವ ಉದ್ಘಾಟನೆಯಾಗಲಿದೆ.ದಸರಾ ದೀಪಾಲಂಕಾರ ಪ್ರತಿ ಬಾರಿಯಂತೆಯೇ ವಿದ್ಯುತ್ ನಿಗಮದ ವತಿಯಿಂದ ಇರಲಿದೆ.ಜಂಬೂ ಸವಾರಿ ಮೆರವಣಿಗೆ ಅರಮನೆ ಆವರಣಕ್ಕೆ ಮಾತ್ರ ಸೀಮಿತವಾಗಲಿದೆ. ಅರಮನೆ ಆವರಣದೊಳಗೆ ನಡೆಯುವ ಜಂಬೂ ಸವಾರಿಗೆ ಎರಡು ಸಾವಿರ ಮಂದಿಗೆ ಅವಕಾಶ ಸಾಮರ್ಥ್ಯವಿದೆ. ಆದರೆ ಎಷ್ಟು ಜನರನ್ನು ಸೇರಿಸಲು ಅನುಮತಿ‌ ಸಿಗುತ್ತದೋ ನೋಡಿ, ಆಹ್ವಾನಿತರ ಸಂಖ್ಯೆಯನ್ನು ನಿರ್ಧರಿಸಲಾಗುವುದು ಎಂದು ಸೋಮಶೇಖರ್ ಮಾಹಿತಿ ನೀಡಿದರು.

Related Stories

No stories found.

Advertisement

X
Kannada Prabha
www.kannadaprabha.com