ಡಿಜೆ ಹಳ್ಳಿ ಗಲಭೆ ಪ್ರಕರಣ: 2 ಕೇಸ್ ಎನ್'ಐಎಗೆ ವಹಿಸಲು ಸರ್ಕಾರ ನಿರ್ಧಾರ

ನಗರದ ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಗಲಭೆ ಸಂಬಂಧ ಕಾನೂನುಬಾಹಿರ ಅಪರಾಧ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಅಡಿ ದಾಖಲಿಸಲಾಗಿರುವ ಎರಡು ಪ್ರಕರಣಗಳನ್ನು ರಾಷ್ಟ್ರೀಯ ತನಿಖಾ ತಂಡಕ್ಕೆ ವಹಿಸಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ ಎಂದು ಎನ್ಐಎ ಹೈಕೋರ್ಟ್'ಗೆ ಶುಕ್ರವಾರ ಮಾಹಿತಿ ನೀಡಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ನಗರದ ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಗಲಭೆ ಸಂಬಂಧ ಕಾನೂನುಬಾಹಿರ ಅಪರಾಧ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಅಡಿ ದಾಖಲಿಸಲಾಗಿರುವ ಎರಡು ಪ್ರಕರಣಗಳನ್ನು ರಾಷ್ಟ್ರೀಯ ತನಿಖಾ ತಂಡಕ್ಕೆ ವಹಿಸಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ ಎಂದು ಎನ್ಐಎ ಹೈಕೋರ್ಟ್'ಗೆ ಶುಕ್ರವಾರ ಮಾಹಿತಿ ನೀಡಿದೆ. 

ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಲೇಮ್ ಕಮಿಷನರ್ ನೇಮಕ ಮಾಡಬೇಕು ಎಂದು ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿ ಹಾಗೂ ಪ್ರಕರಣವನ್ನು ಎನ್ಐಎಗೆ ವಹಿಸಬೇಕೆಂದು ಮನವಿ ಮಾಡಿ ಸಲ್ಲಿಸಿದ್ದ ಅರ್ಜಿಗಳು ಸೇರಿದಂತೆ ಇತರೆ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠಕ್ಕೆ ಎನ್ಐಎ ಪರ ವಕೀಲ ಪಿ.ಪ್ರಸನ್ನಕುಮಾರ್ ಈ ಮಾಹಿತಿ ನೀಡಿದರು. 

ವಿಚಾರಣೆ ವೇಳೆ ಪ್ರಸನ್ನಕುಮಾರ್ ಹಾಜರಾಗಿ ಪ್ರಕರಣಗಳನ್ನು ಎನ್ಐಎಗೆ ವಹಿಸಲು ತೀರ್ಮಾನಿಸಿರುವ ಬಗ್ಗೆ ಕೇಂದ್ರ ಸರ್ಕಾರದ ಮೌಖಿಕ ಸೂಚನೆ ಬಂದಿದ್ದು, ಒಂದೆರಡು ದಿನಗಳಲ್ಲಿ ಅಧಿಕೃತ ಆದೇಶ ಹೊರಬೀಳಲಿದೆ ಎಂದು ನ್ಯಾಯಪೀಠಕ್ಕೆ ತಿಳಿಸಿದರು. 

ಇದೇ ವೇಳೆ ಅಡ್ವೋಕೇಟ್ ಜನರಲ್ ಪ್ರಭುಲಿಂಗ್ ಕೆ.ನಾವದಗಿ, ನ್ಯಾಯಮೂರ್ತಿ ಹೆಚ್.ಎಸ್.ಕೆಂಪಣ್ಣ ಅವರನ್ನು ಕ್ಲೇಮ್ ಕಮಿಷನರ್ ಆಗಿ ನೇಮಕ ಮಾಡಿರುವ ಆದೇಶದ ಪ್ರತಿ ಸಲ್ಲಿಸಿದರು. ಸರ್ಕಾರದ ಪರ ವಕೀಲರು ಗಲಭೆ ಪ್ರಕರಣದ ಮೂರು ತನಿಕಾ ವರದಿಗಳನ್ನು ಮುಚ್ಚಿದ ಲಕೋಟೆಯಲ್ಲಿ ನ್ಯಾಯಪೀಠಕ್ಕೆ ಸಲ್ಲಿಸಿದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com