ಮೈಸೂರಿನ ಆಸ್ಪತ್ರೆಗಳಲ್ಲಿ ತೀವ್ರವಾಗಿದೆ ವೈದ್ಯಕೀಯ ಆಮ್ಲಜನಕದ ಕೊರತೆ

ಸಾಂಸ್ಕೃತಿ ನಗರಿ ಮೈಸೂರಿನಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಏರುತ್ತಿದೆ ಜೊತೆಗೆ  ಸಾವಿನ ಸಂಖ್ಯೆಯೂ ಏರಿಕೆಯಾಗುತ್ತಿದೆ
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಮೈಸೂರು: ಸಾಂಸ್ಕೃತಿ ನಗರಿ ಮೈಸೂರಿನಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಏರುತ್ತಿದೆ ಜೊತೆಗೆ  ಸಾವಿನ ಸಂಖ್ಯೆಯೂ ಏರಿಕೆಯಾಗುತ್ತಿದೆ.

ಕೊರೋನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಬೆನ್ನಲ್ಲೇ ಆಮ್ಲಜನಕದ ಕೊರತೆ ಎದುರಾಗುತ್ತಿದೆ. ಕೋವಿಡ್ ರೋಗಿಗಳಿಗೆ ವೆಂಟಿಲೇಟರ್ ಗೆ ಆಕ್ಸಿಜನ್ ಪೂರೈಕೆ ಮಾಡುತ್ತಿರುವ ಬೆನ್ನಲ್ಲೇ ಕೊರತೆ ಎದುರಾಗದಂತೆ ಹಲವು ಪೂರೈಕೆದಾರರನ್ನು ಸಂಪರ್ಕಿಸಲಾಗುತ್ತಿದೆ.

ಇದು 13 ಕೆಜಿ ಸಾಮರ್ಥ್ಯದ ಸಿಲಿಂಡರ್ ಗಳಾಗಿದ್ದು , ಕೋವಿಡ್ ಮತ್ತು ಕೋವಿಡ್ ಅಲ್ಲದ ರೋಗಿಗಳಿಗೆ ಕನಿಷ್ಠ 4.5 ಕಿಲೋ ಸಿಲಿಂಡರ್ ಅವಶ್ಯಕತೆಯಿದೆ. ನಮ್ಮ ಮೇಲೆ ಒತ್ತಡವಿರುತ್ತದೆ, ಆಕ್ಸಿಜನ್ ಕೊರತೆಯಿಂದಾಗಿ ಐಸಿಯುವಿನಲ್ಲಿ ಬೆಡ್ ಗಳ ಸಂಖ್ಯೆಯನ್ನು ಹೆಚ್ಚಿಸಲಾಗುತ್ತಿಲ್ಲ ಎಂದು ಖಾಸಗಿ ಆಸ್ಪತ್ರೆ ಎಂಡಿ ಡಾ.ಯೋಗಣ್ಣ ಎಂಬುವರು ತಿಳಿಸಿದ್ದಾರೆ.

ಸರ್ಕಾರ ಈ ಸಮಸ್ಯೆಯತ್ತ ಗಮನ ಹರಿಸಿ ಆಕ್ಸಿಜನ್ ಪೂರೈಸಬೇಕೆಂದು ಒತ್ತಾಯಿಸಿದ್ದಾರೆ. ಈಗ ಸದ್ಯ 100 ಆಕ್ಸಿಜನ್ ಸಿಲಿಂಡರ್ ಪೂರೈಸುತ್ತಿದ್ದು, ಅದನ್ನು 200ಕ್ಕೆರಿಸಬೇಕೆಂದು ಒತ್ತಾಯಿಸಿದ್ದಾರೆ. ವೈದ್ಯಕೀಯ ಆಕ್ಸಿಜನ್ ಪೂರೈಕೆದಾರರ ಜೊತೆ ಸಮಾಲೋಚಿಸಿದ್ದು, ಅವಶ್ಯಕತೆಗೆ ತಕ್ಕಂತೆ ಪೂರೈಸಲಿದ್ದಾರೆ ಎಂದು ಜಿಲ್ಲಾಧಿಕಾರಿ ಶರತ್ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com