ತೆರೆದ ಪುಸ್ತಕ ಪರೀಕ್ಷೆ ವ್ಯವಸ್ಥೆ ಕುರಿತು ಪರಿಶೀಲನೆ- ಸುರೇಶ್ ಕುಮಾರ್ 

ಶಾಲಾ ಹಂತದಲ್ಲಿ ಓಪನ್ ಬುಕ್ ಎಕ್ಸಾಮ್ – ಪುಸ್ತಕ ನೋಡಿ ಪರೀಕ್ಷೆ ಬರೆಯುವ ಪದ್ಧತಿ ಜಾರಿಗೆ ರಾಜ್ಯ ಸರ್ಕಾರ ಪರಿಶೀಲನೆ ನಡೆಸುತ್ತಿದೆ.
ಶಿಕ್ಷಣ ಸಚಿವ ಎಸ್ . ಸುರೇಶ್ ಕುಮಾರ್
ಶಿಕ್ಷಣ ಸಚಿವ ಎಸ್ . ಸುರೇಶ್ ಕುಮಾರ್

ಬೆಂಗಳೂರು/ಚಾಮರಾಜನಗರ: ಶಾಲಾ ಹಂತದಲ್ಲಿ ಓಪನ್ ಬುಕ್ ಎಕ್ಸಾಮ್ – ಪುಸ್ತಕ ನೋಡಿ ಪರೀಕ್ಷೆ ಬರೆಯುವ ಪದ್ಧತಿ ಜಾರಿಗೆ ರಾಜ್ಯ ಸರ್ಕಾರ ಪರಿಶೀಲನೆ ನಡೆಸುತ್ತಿದೆ.

ಪಾಶ್ಚಿಮಾತ್ಯ ದೇಶಗಳಲ್ಲಿ ಅಸ್ತಿತ್ವದಲ್ಲಿರುವ ತೆರೆದ ಪುಸ್ತಕ ಪರೀಕ್ಷೆ - ಓಪನ್ ಬುಕ್ ಎಕ್ಸಾಂ ಪರಿಕಲ್ಪನೆಯನ್ನು ರಾಜ್ಯದಲ್ಲೂ ಜಾರಿಗೆ ತರುವಂತೆ ಸರ್ಕಾರದ ಮೇಲೆ ಒತ್ತಡ ಹೆಚ್ಚಾಗಿದೆ. ಹಲವು ತಜ್ಞರು ಇಂತಹ ವ್ಯವಸ್ಥೆಯಿಂದ ವಿದ್ಯಾರ್ಥಿಗಳ ಬುದ್ದಿಶಕ್ತಿ ಹೆಚ್ಚಿಸಲು ಸಹಕಾರಿಯಾಗಲಿದೆ ಎಂದು ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್, ಹಲವು ತಜ್ಞರು ಈ ಕುರಿತು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.  ಈ ಹಿನ್ನೆಲೆಯಲ್ಲಿ ಸಮಗ್ರ ಚರ್ಚೆಯ ನಂತರ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com