ಎತ್ತಿನಹೊಳೆ ಯೋಜನೆಯ ಮೊದಲ ಹಂತದ ಕಾಮಗಾರಿ 2021ರ ಜೂನ್ ತಿಂಗಳೊಳಗಾಗಿ ಪೂರ್ಣ: ಸರ್ಕಾರ

ವಿವಾದಿತ ಎತ್ತಿನಹೊಳೆ ಯೋಜನೆಯ ಮೊದಲ ಹಂತದ ಕಾಮಗಾರಿಯನ್ನು 2021ರ ಜೂನ್ ತಿಂಗಳೊಳಗಾಗಿ ಪೂರ್ಣಗೊಳಿಸಲಾಗುತ್ತದೆ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿಯವರು ಭರವಸೆ ನೀಡಿದ್ದಾರೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ವಿವಾದಿತ ಎತ್ತಿನಹೊಳೆ ಯೋಜನೆಯ ಮೊದಲ ಹಂತದ ಕಾಮಗಾರಿಯನ್ನು 2021ರ ಜೂನ್ ತಿಂಗಳೊಳಗಾಗಿ ಪೂರ್ಣಗೊಳಿಸಲಾಗುತ್ತದೆ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿಯವರು ಭರವಸೆ ನೀಡಿದ್ದಾರೆ. 

ಬೆಂಗಳೂರಿನಲ್ಲಿ ಕಾಮಗಾರಿಗೆ ಭೂ ಸ್ವಾಧೀನ ಪ್ರಕ್ರಿಯೆ ಸಂಬಂಧಿಸಿದಂತೆ ರೈತ ಮುಖಂಡರ ಜೊತೆಗೆ ಮಾತುಕತೆ ನಡೆಸಿದ ಅವರು, ಎತ್ತಿನಹೊಳೆ ಯೋಜನೆ ಗೆ ಸಂಬಂಧಿಸಿದಂತೆ ಭೂ ಸ್ವಾಧೀನ ಪ್ರಕ್ರಿಯೆ ಚುರುಕುಗೊಳ್ಳುತ್ತಿದ್ದು ಮೊದಲ ಹಂತದ ಕಾಮಗಾರಿಗಳು ಮುಂದಿನ ಜೂನ್ ತಿಂಗಳ ಒಳಗೆ ಪೂರ್ಣಗೊಳ್ಳಲಿದೆ ಎಂದು ಹೇಳಿದ್ದಾರೆ. 

ರಾಜ್ಯದಲ್ಲಿ ಜಲಸಂಪನ್ಮೂಲ ಇಲಾಖೆ ಕೈಗೆತ್ತಿಕೊಂಡಿರುವ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಲು ರೂ.1.10 ಲಕ್ಷ ಕೋಟಿ ಹಣ ಬೇಕಾಗಿದೆ. ಎಷ್ಟೇ ಕಷ್ಟವಾದರೂ ಸಾಲ ಮಾಡಿಯಾದರೂ ನೀರಾವರಿ ಯೋಜನೆ ಕೈಗೊಳ್ಳುವಂತೆ ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ. ಹೀಗಾಗಿ ಯಾವ ಯೋಜನೆಯನ್ನೂ ಸ್ಥಗಿತಗೊಳಿಸುವುದಿಲ್ಲ. ಕೃಷ್ಣಾ ಮೇಲ್ದಂಡೆ ಯೋಜನೆಯ ಭೂ ಸ್ವಾಧೀನಕ್ಕೆ ದರ ನಿಗದಿ ಸಂಬಂಧ ಕೆಲ ಸಮಸ್ಯೆ ಇದೆ. 

ಈ ಬಗ್ಗೆ ಸದ್ಯದಲ್ಲೇ ಮುಖ್ಯಮಂತ್ರಿ ಯಡಿಯೂರಪ್ಪ ಅವರೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಉಳಿದಂತೆ ಎತ್ತಿನಹೊಳೆ ಯೋಜನೆಯಡಿ ಲಿಫ್ಟ್ ಕಾಂಪೊನೆಂಟ್ ಮತ್ತು ಗುರುತ್ವ ಕಾಲುವೆಯ 31 ಕಿಲೋಮೀಟರ್ ವರೆಗಿನ ಕಾಮಗಾರಿಗಳನ್ನು ಪೂರ್ಣಗೊಳಿಸಿ 2021 ಮುಂಗಾರು ಹಂಗಾಮಿನಲ್ಲಿ ವೇದಾ ವ್ಯಾಲಿಗೆ ಪ್ರಾಯೋಗಿಕವಾಗಿ ನೀರು ಹರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com