ಕೊರೋನಾಘಾತಕ್ಕೆ ಕರ್ನಾಟಕ ತತ್ತರ: ಇಂದು ದಾಖಲೆಯ 9,894 ಪ್ರಕರಣ ಪತ್ತೆ, 4.59 ಲಕ್ಷ ಸೋಂಕು!

ರಾಜ್ಯದಲ್ಲಿ ಕೊರೋನಾ ವೈರಸ್ ಅಟ್ಟಹಾಸ ಮುಂದುವರೆಸಿದೆ. ಇಂದು 9,894 ಮಂದಿ ಕೊರೋನಾಗೆ ತುತ್ತಾಗಿದ್ದಾರೆ. ಇದರೊಂದಿಗೆ ಸೋಂಕಿತರ ಸಂಖ್ಯೆ 4,59,445ಕ್ಕೇರಿಕೆಯಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಅಟ್ಟಹಾಸ ಮುಂದುವರೆಸಿದೆ. ಇಂದು 9,894 ಮಂದಿ ಕೊರೋನಾಗೆ ತುತ್ತಾಗಿದ್ದಾರೆ. ಇದರೊಂದಿಗೆ ಸೋಂಕಿತರ ಸಂಖ್ಯೆ 4,59,445ಕ್ಕೇರಿಕೆಯಾಗಿದೆ.

ಇನ್ನು ರಾಜ್ಯದಲ್ಲಿ ಇಂದು 104 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 7,265ಕ್ಕೆ ಏರಿಕೆಯಾಗಿದೆ.

ಕೊರೋನಾ ವೈರಸ್ ನಿಂದಾಗಿ ಕಳೆದ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ 45 ಸೋಂಕಿತರು ಸೇರಿದಂತೆ ರಾಜ್ಯದಲ್ಲಿ ಒಟ್ಟು 104 ಮಂದಿ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಇಂದು ಬೆಂಗಳೂರು ನಗರವೊಂದರಲ್ಲೆ ಅತಿ ಹೆಚ್ಚು ಅಂದರೆ 3,479 ಹೊಸ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಸಿಲಿಕಾನ್ ಸಿಟಿಯ ಸೋಂಕಿತರ ಸಂಖ್ಯೆ 1,70,662ಕ್ಕೆ ಏರಿಕೆಯಾಗಿದೆ.

ಇಂದು 8,402 ಮಂದಿ ಆಸ್ಪತ್ಪೆಯಿಂದ ಡಿಸ್ಚಾರ್ಜ್ ಆಗಿದ್ದು, ಗುಣಮುಖರಾದವರ ಸಂಖ್ಯೆ 3,52,958ಕ್ಕೆ ಏರಿಕೆಯಾಗಿದೆ. 99,203 ಮಂದಿ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪೈಕಿ 807 ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com