ಕೊರೋನಾ ಕರಿಛಾಯೆ: ಸೆ.16ರಿಂದ ಮೂರು ದಿನ ಮಾದಪ್ಪನ ದರ್ಶನಕ್ಕಿಲ್ಲ ಅವಕಾಶ

ಕೊರೋನಾ ಮುನ್ನೆಚ್ಚರಿಕೆ ಕ್ರಮವಾಗಿ ಇದೇ 16ರಿಂದ 18ರವರೆಗೆ ಮಲೆ ಮಹದೇಶ್ವರ ದೇಗುಲಕ್ಕೆ ಭಕ್ತರ ಪ್ರವೇಶ ನಿರ್ಬಂಧಿಸಿ ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ಆದೇಶ ಹೊರಡಿಸಿದ್ದಾರೆ.
ಮಲೆ ಮಹದೇಶ್ವರ ದೇವಸ್ತಾನ
ಮಲೆ ಮಹದೇಶ್ವರ ದೇವಸ್ತಾನ

ಚಾಮರಾಜನಗರ: ಕೊರೋನಾ ಮುನ್ನೆಚ್ಚರಿಕೆ ಕ್ರಮವಾಗಿ ಇದೇ 16ರಿಂದ 18ರವರೆಗೆ ಮಲೆ ಮಹದೇಶ್ವರ ದೇಗುಲಕ್ಕೆ ಭಕ್ತರ ಪ್ರವೇಶ ನಿರ್ಬಂಧಿಸಿ ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ಆದೇಶ ಹೊರಡಿಸಿದ್ದಾರೆ.

ಸೆ.16ರಿಂದ 18ರವರೆಗೆ ದೇವರಿಗೆ ಎಣ್ಣೆ ಮಜ್ಜನ, ಅಮವಾಸ್ಯೆ ವಿಶೇಷ ಪೂಜೆ ನಡೆಯುವುದರಿಂದ ಭಕ್ತರ ಸಂಖ್ಯೆ ಅಧಿಕವಾಗಲಿರುವ ಹಿನ್ನೆಲೆ, ಈ ಸಂದರ್ಭದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಕಷ್ಟಸಾಧ್ಯವಾದ್ದರಿಂದ ಡಿಸಿ ಭಕ್ತರ ಪ್ರವೇಶಕ್ಕೆ ನಿರ್ಬಂಧ ಹೇರಿದ್ದಾರೆ.

ಇನ್ನು ಅನ್ ಲಾಕ್ ಬಳಿಕ ಮಲೆ ಮಹದೇಶ್ವರ ಬೆಟ್ಟಕ್ಕೆ ಬರುವ ಭಕ್ತರ ಸಂಖ್ಯೆಯಲ್ಲಿ ಏರಿಕೆ ಕಂಡಿದ್ದು, ಪ್ರಾಧಿಕಾರದ ಸಾರಿಗೆ ವ್ಯವಸ್ಥೆ, ಲಾಡು ಮಾರಾಟಕ್ಕೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಜೊತೆಗೆ ಭಕ್ತರಿಗೆ ಬೆಟ್ಟದಲ್ಲಿ ವಾಸ್ತವ್ಯಕ್ಕೆ ಇನ್ನೂ ಅವಕಾಶ ನೀಡಿಲ್ಲ.

ವರದಿ: ಗುಳಿಪುರ ನಂದೀಶ

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com