ರಾಜ್ಯದ 1,130 ಗ್ರಾಮಗಳಲ್ಲಿ ಜಿಲ್ಲಾ ಪಂಚಾಯಿತಿಯಿಂದ ಆರೋಗ್ಯ ತಪಾಸಣೆ

ಕೊರೋನಾ ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಆರೋಗ್ಯ ತಪಾಸಣೆ ದೊಡ್ಡ ಸಮಸ್ಯೆಯಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯಿತಿ 506 ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಬರುವ 1,130 ಹಳ್ಳಿಗಳ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲು ಯೋಜಿಸುತ್ತಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಳಗಾವಿ: ಕೊರೋನಾ ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಆರೋಗ್ಯ ತಪಾಸಣೆ ದೊಡ್ಡ ಸಮಸ್ಯೆಯಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯಿತಿ 506 ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಬರುವ 1,130 ಹಳ್ಳಿಗಳ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲು ಯೋಜಿಸುತ್ತಿದೆ.

ರೋಗಿಗಳಿಗೆ ತಪಾಸಣೆ ಮತ್ತು ಚಿಕಿತ್ಸೆ ನೀಡಲಾಗುತ್ತದೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಎಲ್ಲಾ ಸೌಲಭ್ಯಗಳನ್ನು ಒದಗಿಸುತ್ತದೆ.

ಕೋವಿಡ್ -19 ಜೊತೆಗೆ ಹೆಚ್ಚಿನ ಹೊರೆಯಾಗಿದೆ, ದೀರ್ಘಕಾಲದ ಕಾಯಿಲೆಗಳು ಮತ್ತು ಇತರ ಕಾಯಿಲೆಗಳನ್ನು ಹೊಂದಿರುವವರಿಗೆ ಆಗತ್ಯ ಸೌಲಭ್ಯ ಒದಗಿಸುವುದು ಕಷ್ಟವಾಗಿರುವ  ಕಾರಣ ಈ ಯೋಜನ ಜಾರಿಗೆ ತರಲು ನಿರ್ದರಿಸಲಾಗುತ್ತಿದೆ.

ಮಧುಮೇಹ, ರಕ್ತದೊತ್ತಡ. ಜ್ವರ ಮತ್ತು ಇತರ ಸಮಸ್ಯೆಗಳಿಂದ ಬಳಲುತ್ತಿರುವವರಿಗೆ ಶಿಬಿರದಲ್ಲಿ ಆರೋಗ್ಯ ತಪಾಸಣೆ ನಡೆಸಿ ಅಗತ್ಯ ಔಷಧಿಗಳನ್ನು ಪೂರೈಸಲಾಗುವುದು.

ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿನ ವೈದ್ಯರು ಇತರ ಕಾಯಿಲೆಗಳಿಂದ ಬಳಲುತ್ತಿರುವವರಿಗೆ ಚಿಕಿತ್ಸೆ ನೀಡುವುದು ಕಠಿಣ ಎಂದು ಹೇಳುತ್ತಿದ್ದಾರೆ 

60 ವರ್ಷ ಮೇಲ್ಪಟ್ಟವರು, ಗರ್ಭಣಿಯರು, ತಾಲುಣಿಸುವ ತಾಯಂದಿರು ಬೇರೆ ಕಾಯಿಲೆಯಿಂದ ಬಳಲುತ್ತಿರುವವರಿಗಾಗಿ ಆರೋಗ್ಯ ತಪಾಸಣೆ ನಡೆಸಲಾಗುವುದು,

ಇದಕ್ಕಾಗಿ ತಜ್ಞ ವೈದ್ಯರಿಂದ ಗ್ರಾಮ ಪಂಚಾಯಿತಿ ಸಿಬ್ಬಂದಿ ಮತ್ತು ಆಶಾ ಕಾರ್ಯಕರ್ತೆಯರಿಗೆ ತರಬೇತಿ ಕೊಡಿಸಲಾಗುವುದು.

ಮನೆ-ಮನೆಗೆ ಆಶಾ ಕಾರ್ಯಕರ್ತೆಯರು ತೆರಳಿ  ನಿಗದಿತ ದಿನಾಂಕಗಳಂದು ಪರೀಕ್ಷೆ ನಡೆಸಲಿದ್ದಾರೆ.  ಮಧುಮೇಹ , ಹೃದಯ ಕಾಯಿಲೆ ಸೇರಿದಂತೆ ಮತ್ತಿತರ ಸಮಸ್ಯೆಗಳಿಂದ ಬಳಲುತ್ತಿರುವವರಿಗೆ ಉಪಯೋಗವಾಲೆಂಬ ಉದ್ದೇಶದಿಂದ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಆರೋಗ್ಯ ತಪಾಸಣೆ ನಡೆಸಲಾಗುವುದು ಎಂದು ಬೆಳಗಾವಿ ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿ ದರ್ಶನ್ ಎಚ್.ವಿ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com