ಕಾಂಗ್ರೆಸ್ -ಜೆಡಿಎಸ್ ಸರ್ಕಾರದಲ್ಲಿ ಡ್ರಗ್ಸ್ ದಂಧೆಗೆ ರಕ್ಷಣೆ- ಶೆಟ್ಟರ್ ಕಿಡಿ

ಕಾಂಗ್ರೆಸ್ ಹಾಗೂ ಜೆಡಿಎಸ್ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ  ಡ್ರಗ್ಸ್ ದಂಧೆ ಪ್ರಕರಣಗಳು ಹೊರಗಡೆ ಬಾರದಿರುವುದಕ್ಕೆ  ಆಡಳಿತಗಾರರ ರಕ್ಷಣೆಯೇ ಪ್ರಮುಖ  ಕಾರಣ ಎಂದು ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ದೂರಿದ್ದಾರೆ.

Published: 14th September 2020 06:02 PM  |   Last Updated: 14th September 2020 06:06 PM   |  A+A-


Jagadish_Shetter1

ಜಗದೀಶ್ ಶೆಟ್ಟರ್

Posted By : Nagaraja AB
Source : UNI

ಧಾರವಾಡ: ಕಾಂಗ್ರೆಸ್ ಹಾಗೂ ಜೆಡಿಎಸ್ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ  ಡ್ರಗ್ಸ್ ದಂಧೆ ಪ್ರಕರಣಗಳು ಹೊರಗಡೆ ಬಾರದಿರುವುದಕ್ಕೆ  ಆಡಳಿತಗಾರರ ರಕ್ಷಣೆಯೇ ಪ್ರಮುಖ  ಕಾರಣ ಎಂದು ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ದೂರಿದ್ದಾರೆ.

ರಾಜ್ಯದಲ್ಲಿ ಇತ್ತೀಚೆಗೆ ಭುಗಿಲೆದ್ದಿರುವ ಡ್ರಗ್ ಪ್ರಕರಣದಲ್ಲಿ ತೊಡಗಿರುವವರನ್ನು ಕೂಡಲೇ ಬಂಧಿಸಿ ಕಠಿಣ ಕ್ರಮ ಕೈಗೊಳ್ಳಲು, ಇಂದು ಹುಬ್ಬಳ್ಳಿಯ ಬಿ.ವಿ.ಬಿ ಕಾಲೇಜಿನಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ನಡೆದ "ಸಹಿ ಸಂಗ್ರಹ ಅಭಿಯಾನ"ದಲ್ಲಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು.

ಶಾಸಕ ಜಮೀರ್ ಅಹಮದ್ ಕ್ಯಾಸಿನೋಗೆ ಹೋಗಿದ್ದು ತಪ್ಪಲ್ಲ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸಮರ್ಥನೆ ಮಾಡಿಕೊಳ್ಳುವ ಮೂಲಕ ತಮ್ಮ  ವ್ಯಕ್ತಿತ್ವವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು. 

ಕ್ಯಾಸಿನೋಗೆ ಹೋಗಬಾರದು, ಜೂಜು ಆಡಬಾರದು ಎಂದು ಸಿದ್ದರಾಮಯ್ಯ ಹೇಳಬೇಕಿತ್ತು. ಆದರೆ, ಜಮೀರ್ ಕ್ಯಾಸಿನೋಗೆ ಹೋಗಿದ್ದು ತಪ್ಪಲ್ಲ ಎಂದು ಹೇಳುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.

Stay up to date on all the latest ರಾಜ್ಯ news
Poll
The grand Central Vista project is estimated to cost `20,000 crore

ಕೋವಿಡ್ ಬಿಕ್ಕಟ್ಟಿನ ದೃಷ್ಟಿಯಿಂದ ಪ್ರಧಾನಿ ಮೋದಿ ಸೆಂಟ್ರಲ್ ವಿಸ್ಟಾ ಯೋಜನೆಯನ್ನು ತಡೆಹಿಡಿಯಬೇಕೇ?


Result
ಹೌದು
ಬೇಡ
flipboard facebook twitter whatsapp