ಬಾದಾಮಿಗೆ ಸಿದ್ದರಾಮಯ್ಯ ಭೇಟಿ, ರಸ್ತೆಗೆ ಭೂಮಿ ಕೊಟ್ಟ ರೈತನಿಗೆ ವೈಯಕ್ತಿಕ ಪರಿಹಾರ

ಕೊರೋನಾ ಸೋಂಕಿನ ಬಳಿಕ ಬೆಂಗಳೂರಿನಲ್ಲಿಯೇ ನೆಲೆಸಿದ್ದ ಮಾಜಿ ಮುಖ್ಯಮಂತ್ರಿ, ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಸೋಮವಾರದಿಂದ ಎರಡು ದಿನಗಳ ಕಾಲ ತಮ್ಮ ಮತಕ್ಷೇತ್ರ ಬಾದಾಮಿಗೆ ಭೇಟಿ ನೀಡಿದ್ದಾರೆ.
ಸಿದ್ದರಾಮಯ್ಯ
ಸಿದ್ದರಾಮಯ್ಯ

ಬೆಂಗಳೂರು: ಕೊರೋನಾ ಸೋಂಕಿನ ಬಳಿಕ ಬೆಂಗಳೂರಿನಲ್ಲಿಯೇ ನೆಲೆಸಿದ್ದ ಮಾಜಿ ಮುಖ್ಯಮಂತ್ರಿ, ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಸೋಮವಾರದಿಂದ ಎರಡು ದಿನಗಳ ಕಾಲ ತಮ್ಮ ಮತಕ್ಷೇತ್ರ ಬಾದಾಮಿಗೆ ಭೇಟಿ ನೀಡಿದ್ದಾರೆ.

ಬಾದಾಮಿಯಲ್ಲಿ ಮಳೆಯಿಂದ ಪ್ರವಾಹವುಂಟಾಗಿದ್ದು, ದೂರವಾಣಿ ಮೂಲಕವೇ ಬೆಂಗಳೂರಿನಲ್ಲಿಂದಲೇ ಇಷ್ಟು ದಿನ ಬಾದಾಮಿ ಬಗ್ಗೆ ಮಾಹಿತಿ ಪಡೆಯುತ್ತಿದ್ದ ಸಿದ್ದರಾಮಯ್ಯ ಇದೀಗ ಕ್ಷೇತ್ರದ ಜನರಿಂದ ಮಾಹಿತಿ ಪಡೆಯಲಿದ್ದಾರೆ.

ಪ್ರವಾಹ ಪೀಡಿತ ಗೋವನಕೊಪ್ಪ ಹಳೆ ಸೇತುವೆ, ಬೆಳೆ ಹಾನಿ ಪರಿಶೀಲನೆ ನಡೆಸಿದ ಸಿದ್ದರಾಮಯ್ಯ, ಪ್ರವಾಹದಿಂದಾಗಿ ಹಾನಿ ಕುರಿತು ಮಾಹಿತಿ ಪಡೆದರು. ಈ ವೇಳೆ ರೈತರು ಮಲಪ್ರಭಾ ನದಿ ಒತ್ತುವರಿ ತೆರವುಗೊಳಿಸುವಂತೆ ಸಿದ್ದರಾಮಯ್ಯಗೆ ಮನವಿ ಮಾಡಿದರು. ಈ ಕುರಿತು ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ, ನೀರಾವರಿ ಸಚಿವರೊಂದಿಗೆ ಈ ಸಂಬಂಧ ಮಾತನಾಡುತ್ತೇನೆ, ಒತ್ತುವರಿ ತೆರವಿಗೆ ಕ್ರಮ ಕೈಗೊಳ್ಳುವಂತೆ ಮನವಿ ಮಾಡ್ತೇನೆ ಎಂದು ಭರವಸೆ ನೀಡಿದರು.

ಬಳಿಕ, ತಳಕವಾಡ ಗ್ರಾಮದ ಆಶ್ರಯ ಕಾಲೋನಿಗೆ ಭೇಟಿ ನೀಡಿದ ಸಿದ್ದರಾಮಯ್ಯ, ರಸ್ತೆಗೆ ಜಮೀನು ಕೊಟ್ಟ ರೈತ ಕುಟುಂಬಕ್ಕೆ ವೈಯಕ್ತಿಕವಾಗಿ 1 ಲಕ್ಷ ರೂ. ಪರಿಹಾರ ನೀಡಿದರು.

ಕಳೆದೆರಡು ತಿಂಗಳಿನಿಂದ ಕ್ಷೇತ್ರದಲ್ಲಿ ಮಲಪ್ರಭಾ ನೆರೆಯಿಂದಾಗಿ ಚೊಳಚಗುಡ್ಡ, ಐಹೊಳೆ ಸೇರಿದಂತೆ ನದಿಪಾತ್ರದ ಅನೇಕ ಗ್ರಾಮಗಳಲ್ಲಿ ಅಪಾರ ಪ್ರಮಾಣದ ಬೆಳೆನಾಶವಾಗಿದೆ. ಈ ಹಿನ್ನಲೆಯಲ್ಲಿ ಅಧಿಕಾರಿಗಳ ಜೊತೆ ಸಭೆ ನಡೆಸಿ ಮಂಗಳವಾರ ಸಹ ಹಾನಿಗೀಡಾದ ಪ್ರದೇಶಗಳಿಗೆ ಸಿದ್ದರಾಮಯ್ಯ ಭೇಟಿ ನೀಡಲಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com