'ಹಿಂದಿ ದಿವಸ'ಆಚರಣೆ ಭಾಷಾ ಅಹಂಕಾರದ ಸಂಕೇತ, ಇದಕ್ಕೆ ಸ್ವಾಭಿಮಾನಿ ಕನ್ನಡಿಗರ ವಿರೋಧವಿದೆ: ಹೆಚ್ ಡಿ ಕುಮಾರಸ್ವಾಮಿ

ಇತ್ತೀಚೆಗೆ ಹಿಂದಿ ಭಾಷೆಯನ್ನು ಸಿದ್ಧಾಂತದ ವಿಚಾರವಾಗಿ ಪರಿವರ್ತಿಸಲಾಗಿದೆ. ರಾಷ್ಟ್ರೀಯತೆ, ದೇಶಭಕ್ತಿ, ಹಿಂದುತ್ವದೊಂದಿಗೆ ಹಿಂದಿಯನ್ನು ಸಮೀಕರಿಸಲಾಗಿದೆ. ಇದು ಅತ್ಯಂತ ದೊಡ್ಡ ದೇಶದ್ರೋಹದ ಕೆಲಸ ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ವಿರೋಧ ವ್ಯಕ್ತಪಡಿಸಿದ್ದಾರೆ.
ಹೆಚ್ ಡಿ ಕುಮಾರಸ್ವಾಮಿ
ಹೆಚ್ ಡಿ ಕುಮಾರಸ್ವಾಮಿ

ಬೆಂಗಳೂರು: ಇತ್ತೀಚೆಗೆ ಹಿಂದಿ ಭಾಷೆಯನ್ನು ಸಿದ್ಧಾಂತದ ವಿಚಾರವಾಗಿ ಪರಿವರ್ತಿಸಲಾಗಿದೆ. ರಾಷ್ಟ್ರೀಯತೆ, ದೇಶಭಕ್ತಿ, ಹಿಂದುತ್ವದೊಂದಿಗೆ ಹಿಂದಿಯನ್ನು ಸಮೀಕರಿಸಲಾಗಿದೆ. ಇದು ಅತ್ಯಂತ ದೊಡ್ಡ ದೇಶದ್ರೋಹದ ಕೆಲಸ ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ವಿರೋಧ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ವಿವಿಧ ಭಾಷೆಗಳನ್ನು ಆಡುವ ಭಾರತೀಯರ ದೇಶಭಕ್ತಿಯನ್ನು ಭಾಷೆ ಮೂಲಕ ಅಳೆಯುವುದು ಅಪಚಾರ, ಇದು ದೇಶದ ಸಮಗ್ರತೆಗೆ ಎಸೆದ ಸವಾಲಾಗಿದೆ. ದಕ್ಷಿಣ ರಾಜ್ಯಗಳ ಪೈಕಿ ಕರ್ನಾಟಕದಲ್ಲಿ ಹಿಂದಿಯನ್ನು ಸುಲಭವಾಗಿ ಹೇರಬಹುದು ಎಂದು ಹಿಂದಿ ಶ್ರೇಷ್ಠತೆ ವ್ಯಸನಿಗಳು ಅಂದಾಜಿಸಿದ್ದಾರೆ. ಇದಕ್ಕೆ ರಾಜ್ಯ ಬಿಜೆಪಿ ನಾಯಕರ ಪ್ರೋತ್ಸಾಹ, ಬೆಂಬಲವೂ ಕಾರಣವಿರಬಹುದು. ಕನ್ನಡಿಗರದ್ದು ಸೌಹಾರ್ದ ಗುಣ. ಅದನ್ನು ದೌರ್ಬಲ್ಯ ಎಂದು ಭಾವಿಸಬೇಡಿ ಎಂದು ಎಚ್ಚರಿಕೆ ಕೂಡ ನೀಡಿದ್ದಾರೆ. 

ವಿವಿಧ ಭಾಷೆ, ವಿಭಿನ್ನ ಸಂಸ್ಕೃತಿ, ಪರಂಪರೆಗಳನ್ನು ಒಡಲಲ್ಲಿಟ್ಟುಕೊಂಡ ಭಾರತದಲ್ಲಿ, ಕನ್ನಡಿಗರೂ ಸೇರಿದಂತೆ ಅನ್ಯ ಭಾಷಿಕರ ಮೇಲೆ ಹಿಂದಿಯನ್ನು ಬಲವಂತವಾಗಿ ಹಲವು ಮಾರ್ಗಗಳ ಮೂಲಕ ಹೇರಲಾಗುತ್ತಿದೆ. ಹಿಂದಿ ದಿವಸ ಆಚರಣೆ ಅಂಥವುಗಳಲ್ಲಿ ಒಂದು. ಭಾಷಾ ಅಹಂಕಾರದ ಸಂಕೇತವಾದ ಹಿಂದಿ ದಿವಸಕ್ಕೆ ಸ್ವಾಭಿಮಾನಿ ಕನ್ನಡಿಗರ ಪ್ರಬಲ ವಿರೋಧವಿದೆ ಎಂದು ಅವರು ಹೇಳಿದ್ದಾರೆ.

ಕೇಂದ್ರ ಸರ್ಕಾರ ಇಂದು ಅಂದರೆ ಸೆಪ್ಟೆಂಬರ್ 14ರಂದು ಹಿಂದಿ ದಿವಸ ಆಚರಣೆಗೆ ಕರೆ ನೀಡಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com