ಚಿಕ್ಕಬಳ್ಳಾಪುರ: ಕಾರಿಗೆ ಲಾರಿ ಡಿಕ್ಕಿ, ತಾಯಿ-ಮಕ್ಕಳ ದುರ್ಮರಣ

ಲಾರಿಯೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ತಾಯಿ ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವನ್ನಪ್ಪಿ, ತಂದೆ ಗಂಭೀರವಾಗಿ ಗಾಯಗೊಂಡಿರುವ ದುರ್ಘಟನೆ ಕಳೆದ ರಾತ್ರಿ ರಾಷ್ಟ್ರೀಯ ಹೆದ್ದಾರಿ 7ರಲ್ಲಿ  ಚಿಕ್ಕಬಳ್ಳಾಪುರ ತಾಲೂಕಿನ ದೊಡ್ಡಪ್ಯಾಯಲಗುರ್ಕಿ ಬಳಿ ನಡೆದಿದೆ.

Published: 15th September 2020 10:53 AM  |   Last Updated: 15th September 2020 01:14 PM   |  A+A-


RoadAccident1

ಅಪಘಾತಕ್ಕೀಡಾದ ಲಾರಿಯ ಚಿತ್ರ

Posted By : Nagaraja AB
Source : UNI

ಚಿಕ್ಕಬಳ್ಳಾಪುರ: ಲಾರಿಯೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ತಾಯಿ ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವನ್ನಪ್ಪಿ, ತಂದೆ ಗಂಭೀರವಾಗಿ ಗಾಯಗೊಂಡಿರುವ ದುರ್ಘಟನೆ ಕಳೆದ ರಾತ್ರಿ ರಾಷ್ಟ್ರೀಯ ಹೆದ್ದಾರಿ 7ರಲ್ಲಿ  ಚಿಕ್ಕಬಳ್ಳಾಪುರ ತಾಲೂಕಿನ ದೊಡ್ಡಪ್ಯಾಯಲಗುರ್ಕಿ ಬಳಿ ನಡೆದಿದೆ.

ಬೆಂಗಳೂರಿನಿಂದ ಹೈದರಾಬಾದ್ ಗೆ ತಂದೆ, ತಾಯಿ, ಇಬ್ಬರು ಮಕ್ಕಳು ಸ್ವಿಫ್ಟ್ ಕಾರಿನಲ್ಲಿ ಹೋಗುತ್ತಿದ್ದರು. ಈ ಕಾರಿಗೆ ದೊಡ್ಡಪ್ಯಾಯಲಗುರ್ಕಿ ಬಳಿ ರಾತ್ರಿ 1ರ ವೇಳೆ ಲಾರಿ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ ಎಂದು ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಾಹಿತಿ ನೀಡಿದ್ದಾರೆ.

ಡಿಕ್ಕಿಯ ರಭಸಕ್ಕೆ ತಾಯಿ ಹಾಗೂ ಇಬ್ಬರು ಗಂಡು ಮಕ್ಕಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ತಂದೆ ಸ್ಥಿತಿ ಗಂಭೀರವಾಗಿದ್ದು ನಗರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರು ಹೈದರಾಬಾದ್ ಮೂಲದವರು ಎಂದು ತಿಳಿದುಬಂದಿದೆ. ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸರು  ಪ್ರಕರಣ ದಾಖಲಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.

Stay up to date on all the latest ರಾಜ್ಯ news
Poll
Covid-19_vaccine1

ಕೋವಿಡ್-19 ಲಸಿಕೆ ಅಂತಿಮವಾಗಿ ನಮಗೆ ಸಹಜ ಸ್ಥಿತಿಗೆ ಬರಲು ಸಹಾಯ ಮಾಡುತ್ತದೆಯೇ?


Result
ಹೌದು
ಇಲ್ಲ
ಗೊತ್ತಿಲ್ಲ
flipboard facebook twitter whatsapp