ಕರ್ನಾಟಕಕ್ಕೆ ಕೊರೋನಾಘಾತ: 70 ಬಲಿ, ಬೆಂಗಳೂರು 3,571 ಸೇರಿ ರಾಜ್ಯದಲ್ಲಿ 9,725 ಮಂದಿಗೆ ಪಾಸಿಟಿವ್!

ಕರ್ನಾಟಕದಲ್ಲಿ ಕೊರೋನಾ ವೈರಸ್ ಅಟ್ಟಹಾಸ ಮುಂದುವರೆಸಿದೆ. ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಸೇರಿ  9,725 ಮಂದಿ ಕೊರೋನಾಗೆ ತುತ್ತಾಗಿದ್ದರೆ 70 ಮಂದಿ ಬಲಿಯಾಗಿದ್ದಾರೆ. ಇನ್ನು ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 4,84,990ಕ್ಕೇರಿಕೆಯಾಗಿದೆ.
ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ

ಬೆಂಗಳೂರು: ಕರ್ನಾಟಕದಲ್ಲಿ ಕೊರೋನಾ ವೈರಸ್ ಅಟ್ಟಹಾಸ ಮುಂದುವರೆಸಿದೆ. ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಸೇರಿ  9,725 ಮಂದಿ ಕೊರೋನಾಗೆ ತುತ್ತಾಗಿದ್ದರೆ 70 ಮಂದಿ ಬಲಿಯಾಗಿದ್ದಾರೆ. ಇನ್ನು ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 4,84,990ಕ್ಕೇರಿಕೆಯಾಗಿದೆ.

ಕಳೆದ 24 ಗಂಟೆಗಳಲ್ಲಿ 70 ಮಂದಿ ಮೃತಪಟ್ಟಿದ್ದು ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 7,536ಕ್ಕೆ ಏರಿಕೆಯಾಗಿದೆ.

ಕೊರೋನಾ ವೈರಸ್ ನಿಂದಾಗಿ ಕಳೆದ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ 27 ಸೋಂಕಿತರು ಸೇರಿದಂತೆ ರಾಜ್ಯದಲ್ಲಿ ಒಟ್ಟು 70 ಮಂದಿ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಇಂದು ಬೆಂಗಳೂರು ನಗರವೊಂದರಲ್ಲೆ ಅತಿ ಹೆಚ್ಚು ಅಂದರೆ 3,571 ಹೊಸ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಸಿಲಿಕಾನ್ ಸಿಟಿಯ ಸೋಂಕಿತರ ಸಂಖ್ಯೆ 1,80,283ಕ್ಕೆ ಏರಿಕೆಯಾಗಿದೆ.

ಇಂದು 6,583 ಮಂದಿ ಆಸ್ಪತ್ಪೆಯಿಂದ ಡಿಸ್ಚಾರ್ಜ್ ಆಗಿದ್ದು, ಗುಣಮುಖರಾದವರ ಸಂಖ್ಯೆ 3,75,809ಕ್ಕೆ ಏರಿಕೆಯಾಗಿದೆ. 1,01,626 ಮಂದಿ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com