ತೇಜಸ್ವಿ ಸೂರ್ಯ
ತೇಜಸ್ವಿ ಸೂರ್ಯ

ಬೆಂಗಳೂರು ಗಲಭೆ: ಪಿಎಫ್ಐ ನಿಷೇಧ ಕುರಿತು ಸಂಸತ್ತಿನಲ್ಲಿ ಧ್ವನಿ ಎತ್ತಿದ ತೇಜಸ್ವಿ ಸೂರ್ಯ

ಕಳೆದ ಆಗಸ್ಟ್ ತಿಂಗಳಿನಲ್ಲಿ ನಡೆದ ಬೆಂಗಳೂರು ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಡಿಪಿಐ ಮತ್ತು ಪಿಎಫ್‌ಐ ಸಂಘಟನೆಗಳಿಗೆ ನಿಷೇಧ ಹೇರುವ ಕುರಿತು ಸಂಸತ್ತಿನಲ್ಲಿ ಸಂಸದ ತೇಜಸ್ವಿ ಸೂರ್ಯ ಅವರು ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದ್ದಾರೆ. 

ಬೆಂಗಳೂರು: ಕಳೆದ ಆಗಸ್ಟ್ ತಿಂಗಳಿನಲ್ಲಿ ನಡೆದ ಬೆಂಗಳೂರು ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಡಿಪಿಐ ಮತ್ತು ಪಿಎಫ್‌ಐ ಸಂಘಟನೆಗಳಿಗೆ ನಿಷೇಧ ಹೇರುವ ಕುರಿತು ಸಂಸತ್ತಿನಲ್ಲಿ ಸಂಸದ ತೇಜಸ್ವಿ ಸೂರ್ಯ ಅವರು ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದ್ದಾರೆ. 

ಟರ್ಕಿಶ್ ಯೂತ್ ಫೆಡರೇಶನ್ ಜೊತೆಗೆ ಜಮಾತ್-ಎ-ಇಸ್ಲಾಮಿಯ ವಿದ್ಯಾರ್ಥಿ ಸಂಘಟನೆ, ಸ್ಟೂಡೆಂಟ್ ಇಸ್ಲಾಮಿಕ್ ಸಂಘಟನೆಗಳು ಕೈಜೋಡಿಸಿರುವುದಾಗಿ ಹೇಳಲಾಗುತ್ತಿದ್ದು, ಈ ಸಂಘಟನೆಗಳ ಕುರಿತು ಕೇಂದ್ರ ಸರ್ಕಾರ ಯಾವ ರೀತಿಯ ಕ್ರಮಗಳನ್ನು ಕೈಗೊಂಡಿದೆ ಎಂದು ಪ್ರಶ್ನಿಸಿದ್ದಾರೆ. 

ಈ ಪ್ರಶ್ನೆಗೆ ಗೃಹ ಸಚಿವಾಲಯ ಪ್ರತಿಕ್ರಿಯೆ ನೀಡಿದ್ದು, ಯಾವುದೇ ಪರಿಸ್ಥಿತಿ ಎದುರಾದರೂ ಅಗತ್ಯ ಬಿದ್ದಾಗ ರಾಷ್ಟ್ರೀಯ ಭದ್ರತೆಗೆ ಧಕ್ಕೆಯುಂಟು ಮಾಡುವ, ಕಾನೂನುಗಳ ವಿರುದ್ಧ ನಡೆಯುವ ಸಂಘಟನೆಗಳ ವಿರುದ್ಧ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು ಹೇಳಿದೆ ಎಂದು ತಿಳಿದುಬಂದಿದೆ. 

Related Stories

No stories found.

Advertisement

X
Kannada Prabha
www.kannadaprabha.com