ವಿಜಯಪುರದಲ್ಲಿ ಕಂಪಿಸಿದ ಭೂಮಿ, ಗ್ರಾಮಸ್ಥರಲ್ಲಿ ಆತಂಕ

ವಿಜಯಪುರ ಜಿಲ್ಲೆ ಬಸವನಬಾಗೇವಾಡಿ  ತಾಲ್ಲೂಕಿನ ಹಲವಾರು ಗ್ರಾಮಗಳಲ್ಲಿ ಲಘು ಭೂಕಂಪನದ ಅನುಭವವಾಗಿದೆ. 

Published: 17th September 2020 01:01 PM  |   Last Updated: 17th September 2020 01:01 PM   |  A+A-


Posted By : Raghavendra Adiga
Source : Online Desk

ವಿಜಯಪುರ: ವಿಜಯಪುರ ಜಿಲ್ಲೆ ಬಸವನಬಾಗೇವಾಡಿ  ತಾಲ್ಲೂಕಿನ ಹಲವಾರು ಗ್ರಾಮಗಳಲ್ಲಿ ಲಘು ಭೂಕಂಪನದ ಅನುಭವವಾಗಿದೆ. 

ಅಧಿಕೃತ ಮೂಲಗಳ ಪ್ರಕಾರ, ಮನಗುಳಿ ಮತ್ತು ಇತರ ಹತ್ತಿರದ ಹಳ್ಳಿಗಳಲ್ಲಿ ವಾಸಿಸುವ ಜನರು ಬುಧವಾರ ಮಧ್ಯರಾತ್ರಿಯ ಮುನ್ನ ಭೂಮಿ ಕಂಪಿಸಿದ ಅನುಭವಕ್ಕೆ ಸಾಕ್ಷಿಯಾಗಿದ್ದಾರೆ. ಭೂಮಿ ಕಂಪಿಸುತ್ತಿದ್ದಂತೆ ಅವರೆಲ್ಲಾ ತಮ್ಮ ಮನೆಗಳಿಂದ ಹೊರಗೆ ಓಡಿ ಬಂದಿದ್ದಾರೆ. 

ಮನೆಯಲ್ಲಿದ್ದ ವಸ್ತುಗಳು ಕೆಳಕ್ಕೆ ಬಿದ್ದಿದ್ದವೆಂದು ಹೇಳಿರುವ ಗ್ರಾಮಸ್ಥರು ಕೆಲ ಸೆಕೆಂಡ್ ಗಳ ಕಾಲ ಭೂಮಿ ಕಂಪಿಸಿದ್ದಾಗಿ ಮಾಹಿತಿ ನೀಡಿದ್ದಾರೆ.

ಆದರೆ ಭೂಕಂಪದಿಂದಾಗಿ ಯಾವುದೇ ಪ್ರಾಣಹಾನಿ ಅಥವಾ ಮನೆಗಳಿಗೆ ಹಾನಿಯಾಗಿಲ್ಲ ಎಂದು ಮೂಲಗಳು ತಿಳಿಸಿವೆ

Stay up to date on all the latest ರಾಜ್ಯ news
Poll

ಎನ್‌ಡಿಎ ಆಡಳಿತದಲ್ಲಿ ಭಯೋತ್ಪಾದಕ ದಾಳಿಯಿಂದ ಭಾರತ ಸುರಕ್ಷಿತವಾಗಿದೆಯೇ?


Result
ಹೌದು
ಇಲ್ಲ
ಗೊತ್ತಿಲ್ಲ
flipboard facebook twitter whatsapp