ದೆಹಲಿಯಲ್ಲಿ ಸಿಎಂ ಯಡಿಯೂರಪ್ಪ: ಹಣಕಾಸು, ರಕ್ಷಣಾ ಸಚಿವರ ಭೇಟಿ, ಬಾಕಿ ಅನುದಾನ, ವಿವಿಧ ಯೋಜನೆಗಳಿಗೆ ಅನುಮತಿ ಕೋರಿದ ಬಿಎಸ್'ವೈ

ಮುಖ್ಯಮಂತ್ರಿ ಬಿ.ಎಸ್.ಯಡಿಯುರಪ್ಪ ಅವರು ಗುರುವಾರ ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವನ್ನು ಭೇಟಿ ಮಾಡಿದ್ದು, ರಾಜ್ಯದಲ್ಲಿ ನೆನೆಗುದಿಗೆ ಬಿದ್ದ ಯೋಜನೆಗಳಿಗೆ ಅನುದಾನ ಹಾಗೂ ಕಾಮಗಾರಿಗಳಿಗೆ ಅನುಮೋದನೆ ನೀಡುವಂತೆ ಮನವಿ ಮಾಡಿದರು.
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸುತ್ತಿರುವ ಸಿಎಂ ಯಡಿಯೂರಪ್ಪ
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸುತ್ತಿರುವ ಸಿಎಂ ಯಡಿಯೂರಪ್ಪ

ನವದೆಹಲಿ: ಮುಖ್ಯಮಂತ್ರಿ ಬಿ.ಎಸ್.ಯಡಿಯುರಪ್ಪ ಅವರು ಗುರುವಾರ ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವನ್ನು ಭೇಟಿ ಮಾಡಿದ್ದು, ರಾಜ್ಯದಲ್ಲಿ ನೆನೆಗುದಿಗೆ ಬಿದ್ದ ಯೋಜನೆಗಳಿಗೆ ಅನುದಾನ ಹಾಗೂ ಕಾಮಗಾರಿಗಳಿಗೆ ಅನುಮೋದನೆ ನೀಡುವಂತೆ ಮನವಿ ಮಾಡಿದರು.

ಸಂಜೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ 14 ನೇ ಹಣಕಾಸು ಆಯೋಗದ ಶಿಫಾರಸ್ಸಿರನಂತೆ ಕರ್ನಾಟಕಕ್ಕೆ 5,495 ಕೋಟಿ ರೂ.ಗಳ ವಿಶೇಷ ಅನುದಾನದಲ್ಲಿ ಕಡಿತ ಮಾಡಿದ್ದ ಅನುದಾನವನ್ನು ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ.

ಕಲಬುರಗಿಯಲ್ಲಿ ಕಲ್ಯಾಣ ಕರ್ನಾಟಕ ಉತ್ಸವದಲ್ಲಿ ಪಾಲ್ಗೊಂಡ ನಂತರ ನೇರವಾಗಿ ದೆಹಲಿಗೆ ತೆರಳಿದ ಅವರು, ಸಂಜೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ಅತಿವೃಷ್ಠಿ ಹಾಗೂ ಅನಾವೃಷ್ಟಿಯಿಂದ ರಾಜ್ಯದಲ್ಲಿ ಆಗಿರುವ ನಷ್ಟ, ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಬೇಕಿರುವ ಹಣಕಾಸು ನೆರವಿನ ವಿಚಾರವಾಗಿ ಚರ್ಚೆ ನಡೆಸಿದರು. 

ಈ ವೇಳೆ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಹಾಗೂ ರಾಜ್ಯದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಇದ್ದರು. ಬಳಿಕ ರಾಜನಾಥ್ ಸಿಂಗ್ ಅವರನ್ನು ಭೇಟಿಯಾಗಿ ಚರ್ಚಿಸಿದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com