ಕೋಲಾರ: ರಸ್ತೆ ಅಗಲೀಕರಣ ವಿಳಂಬ: ನಾಳೆ ಜಿಲ್ಲಾಧಿಕಾರಿ ಕಚೇರಿ ಎದುರು ಶಾಸಕಿ ರೂಪಕಲಾ ಶಶಿಧರ್ ಮೌನ ಧರಣಿ

ಹೈಕೋರ್ಟ್ ಆದೇಶದಂತೆ ಜಿಲ್ಲಾಡಳಿತ ಹಾಗೂ ಲೋಕೋಪಯೋಗಿ ಇಲಾಖೆ ರಸ್ತೆ ಅಗಲೀಕರಣ ಕಾರ್ಯ ಕೈಗೆತ್ತಿಕೊಳ್ಳುವಂತೆ ಒತ್ತಾಯಿಸಿ ಸೋಮವಾರದಿಂದ ಆರಂಭವಾಗಲಿರುವ ಅಧಿವೇಶನದಲ್ಲಿ ಪಾಲ್ಗೊಳ್ಳದೆ ಕೋಲಾರ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಮೌನ ಧರಣಿ ನಡೆಸುವುದಾಗಿ ಕೆಜಿಎಫ್ ಶಾಸಕಿ ರೂಪಕಲಾ ಶಶಿಧರ್ ಹೇಳಿದ್ದಾರೆ.
ಶಾಸಕಿ ರೂಪಕಲಾ ಶಶಿಧರ್
ಶಾಸಕಿ ರೂಪಕಲಾ ಶಶಿಧರ್

ಕೋಲಾರ: ಹೈಕೋರ್ಟ್ ಆದೇಶದಂತೆ ಜಿಲ್ಲಾಡಳಿತ ಹಾಗೂ ಲೋಕೋಪಯೋಗಿ ಇಲಾಖೆ ರಸ್ತೆ ಅಗಲೀಕರಣ ಕಾರ್ಯ ಕೈಗೆತ್ತಿಕೊಳ್ಳುವಂತೆ ಒತ್ತಾಯಿಸಿ ಸೋಮವಾರದಿಂದ ಆರಂಭವಾಗಲಿರುವ ಅಧಿವೇಶನದಲ್ಲಿ ಪಾಲ್ಗೊಳ್ಳದೆ ಕೋಲಾರ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಮೌನ ಧರಣಿ ನಡೆಸುವುದಾಗಿ ಕೆಜಿಎಫ್ ಶಾಸಕಿ ರೂಪಕಲಾ ಶಶಿಧರ್ ಹೇಳಿದ್ದಾರೆ.

ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆಗೆ ಮಾತನಾಡಿದ ರೂಪಾ, ಕಾರಣವಿಲ್ಲದೆ ರಸ್ತೆ ಅಗಲೀಕರಣ ಕಾರಣ ವಿಳಂಬವಾಗುತ್ತಿದೆ. ಇದರಿಂದಾಗಿ ಅಶೋಕ ನಗರ ರಸ್ತೆ ದಾಟುವ ಜನರು ದಿನನಿತ್ಯ ನರಕಯಾತನೆ ಅನುಭವಿಸುವಂತಾಗಿದೆ.  ಯಾವುದೇ ಒಬ್ಬ ವ್ಯಕ್ತಿಯ ವಿರುದ್ಧ ಧರಣಿ ಮಾಡುತ್ತಿಲ್ಲ, ಜನರ ಹಿತರಕ್ಷಣೆಗಾಗಿ ಈ ನಿರ್ಧಾರ ಕೈಗೊಂಡಿರುವುದಾಗಿ ತಿಳಿಸಿದರು.

ಮೈನ್ಸ್ ಶಾಲೆಯಿಂದ ಗಾಂಧಿ ಸರ್ಕಲ್ ವರೆಗೂ 3.7 ಕೋಟಿ ರೂ. ವೆಚ್ಚದಲ್ಲಿ ರಸ್ತೆ ಅಗಲೀಕರಣಕ್ಕೆ ನಿರ್ಧರಿಸಲಾಗಿದೆ. 1770 ಮೀಟರ್ ರಸ್ತೆ ಅಗಲೀಕರಣವನ್ನು ಲೋಕೋಪಯೋಗಿ ಇಲಾಖೆಯಿಂದ ಮಾಡಲಾಗಿದೆ. ನಂತರ ಅಶೋಕ್ ನಗರದ ಕೆಲ ಜನರು ಹೈಕೋರ್ಟ್ ಮೆಟ್ಟಿಲೇರಿದ್ದರಿಂದ ಉಳಿದ 230 ಮೀಟರ್ ರಸ್ತೆ ಅಗಲೀಕರಣ ಹಾಗೆಯೇ ಬಿದಿದ್ದೆ ಎಂದು ಅವರು ವಿವರಿಸಿದರು.

ಈ ವಿಚಾರವನ್ನು ಇತ್ಯರ್ಥಪಡಿಸುವಂತೆ ಜಿಲ್ಲಾಧಿಕಾರಿಗಳಿಗೆ ಹೈಕೋರ್ಟ್ ನಿರ್ದೇಶನ ನೀಡಿದೆ. ಹೈಕೋರ್ಟ್ ನಿರ್ದೇಶನದಂತೆ, ಜಿಲ್ಲಾಧಿಕಾರಿ ಸ್ಥಳಕ್ಕೆ ಭೇಟಿ ನೀಡಿ, ರಸ್ತೆಯ ಮಧ್ಯದಿಂದ ಎರಡೂ ಬದಿಗಳಲ್ಲಿ 9 ಮೀಟರ್‌ಗೆ ಅಗಲಗೊಳಿಸುವ ಆದೇಶವನ್ನು ಜಾರಿಗೊಳಿಸಿದರು. ಆದರೆ, ಇಲ್ಲಿಯವರೆಗೂ ರಸ್ತೆ ಅಗಲೀಕರಣ ಕೆಲಸವನ್ನು ಕೈಗೆತ್ತಿಕೊಂಡಿಲ್ಲ. ಯಾವುದೇ ಸಕಾರಾತ್ಮಕ ಪ್ರತಿಕ್ರಿಯೆ ಬಾರದ ಹಿನ್ನೆಲೆಯಲ್ಲಿ ಶನಿವಾರ ಬೆಳಗ್ಗೆ 10-30ಕ್ಕೆ ಜಿಲ್ಲಾಧಿಕಾರಿ ಕಚೇರಿ ಎದುರು ಮೌನ ಧರಣಿ ನಡೆಸಲು ನಿರ್ಧರಿಸಿದ್ದಾಗಿ ಅವರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com