ಮೂಡಬಿದಿರೆ: ದಕ್ಷಿಣ ಕನ್ನಡ ಜಿಲ್ಲೆ ಮೂಡಬಿದಿರೆ ಶಾಸಕ ಉಮಾನಾಥ್ ಕೋಟ್ಯಾನ್ ಅವರಿಗೆ ಕೊರೋನಾ ಸೋಂಕು ದೃಢವಾಗಿದೆ.
ಟ್ವಿಟ್ಟರ್ ನಲ್ಲಿ ಈ ಬಗ್ಗೆ ಮಾಹಿತಿ ನೀಡಿರುವ ಶಾಸಕ "ನಾನು ಕೋವಿಡ್ -19 ಪಾಸಿಟಿವ್ ವರದಿ ಪಡೆದಿದ್ದೇನೆ. ನಾನು ಇದಕ್ಕಾಗಿ ಚಿಕಿತ್ಸೆ ಪಡೆಯುತ್ತಿದ್ದೇನೆ. ದೇವರು ಮತ್ತು ನನ್ನ ಸ್ನೇಹಿತರ ಆಶೀರ್ವಾದದಿಂದ, ಶೀಘ್ರದಲ್ಲೇ ಸೋಂಕಿನಿಂದ ಚೇತರಿಸಿಕೊಳ್ಳುವ ವಿಶ್ವಾಸವಿದೆ 'ಎಂದಿದ್ದಾರೆ.
ಹಾಗೆಯೇ ಇತ್ತೀಚೆಗೆ ತನ್ನನ್ನು ಸಂಪರ್ಕಿಸಿದ್ದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಶಾಸಕರು ವಿನಂತಿಸಿದ್ದಾರೆ.
Advertisement