ಮಡಿಕೇರಿ: ಒಂದು ಕೋಟಿ ರೂ.ಗೆ ಎರಡು ತಲೆ ಹಾವು ಮಾರಾಟಕ್ಕೆ ಯತ್ನಿಸಿದ ವ್ಯಕ್ತಿಯ ಬಂಧನ
ಎರಡು ತಲೆಯ ಹಾವನ್ನು ಒಂದು ಕೋಟಿ ರೂಪಾಯಿಗೆ ಮಾರಾಟ ಮಾಡಲು ಯತ್ನಿಸಿದ ವ್ಯಕ್ತಿಯನ್ನು ಸಿಐಡಿ ಮತ್ತು ಅರಣ್ಯ ಅಧಿಕಾರಿಗಳು ಶುಕ್ರವಾರ ಬಂಧಿಸಿದ್ದಾರೆ.
Published: 18th September 2020 04:57 PM | Last Updated: 18th September 2020 04:57 PM | A+A A-

ಸಾಂದರ್ಭಿಕ ಚಿತ್ರ
ಮಡಿಕೇರಿ: ಎರಡು ತಲೆಯ ಹಾವನ್ನು ಒಂದು ಕೋಟಿ ರೂಪಾಯಿಗೆ ಮಾರಾಟ ಮಾಡಲು ಯತ್ನಿಸಿದ ವ್ಯಕ್ತಿಯನ್ನು ಸಿಐಡಿ ಮತ್ತು ಅರಣ್ಯ ಅಧಿಕಾರಿಗಳು ಶುಕ್ರವಾರ ಬಂಧಿಸಿದ್ದಾರೆ.
ಮೈಸೂರು ಜಿಲ್ಲೆ ಶಾಂತಿನಗರದ ನಿವಾಸಿ ಸೈಯದ್ ಮೋಮಿನ್ (23) ಬಂಧಿತ ಆರೋಪಿ. ಈತ ಕೊಡಗು ಜಿಲ್ಲೆಯ ಮಡಿಕೇರಿಯ ಸಿದ್ದಾಪುರದ ಆನಂದಪುರ ಸಾರ್ವಜನಿಕ ಬಸ್ ತಂಗುದಾಣದ ಬಳಿ ಮಾರಾಟಕ್ಕೆ ಯತ್ನಿಸಿದಾಗ ಪೊಲೀಸರು ಬಂಧಿಸಿದ್ದಾರೆ.
ದಾವಣಗೆರೆಯ ಚೆನ್ನಗಿರಿ ನಲ್ಲೂರಿನಿಂದ 2 ತಲೆಯ ಹಾವನ್ನು ತಂದು 1 ಕೋಟಿ ರೂ.ಗಳಿಗೆ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದಾಗ ಪೊಲೀಸರ ಬಲೆಗೆ ಬಿದ್ದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಖಚಿತ ಮಾಹಿತಿಯ ಮೇರೆಗೆ ವಿರಾಜಪೇಟೆ ಸಿಐಡಿ ಮತ್ತು ಅರಣ್ಯ ಸಂಚಾರಿ ದಳದ ಸಿಬ್ಬಂದಿಗಳು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, 15 ದಿನಗಳವರೆಗೆ ನ್ಯಾಯಾಂಗ ಬಂಧನಕ್ಕೆ ನ್ಯಾಯಾಲಯ ಆದೇಶಿಸಿದೆ.