ಸೆ.21ರಿಂದ ವಿಧಾನಮಂಡಲ ಅಧಿವೇಶನ ಆರಂಭ: ಕಲಾಪಕ್ಕೆ ಹಾಜರಾಗುವವರಿಗೆ ಕೊರೋನಾ ಟೆಸ್ಟ್ ಕಡ್ಡಾಯ

ವಿಧಾನಮಂಡಲ ಅಧಿವೇಶನವು ಸೆ.21ರಿಂದ ಪ್ರಾರಂಭವಾಗುತ್ತಿದೆ. ಈ ಹಿನ್ನೆಲೆಯಲ್ಲಿ ವಿಧಾನಮಂಡಲದ ಉಭಯ ಸದನಗಳ ಪ್ರವೇಶಕ್ಕೆ ಕೊರೋನಾ ನೆಗೆಟಿವ್ ವರದಿ ಕಡ್ಡಾಯವಾಗಿದೆ.
ಅಧಿವೇಶನ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿ ಸ್ವಚ್ಛತಾ ಕಾರ್ಯ ನಡೆಸುತ್ತಿರುವ ಸಿಬ್ಬಂದಿಗಳು
ಅಧಿವೇಶನ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿ ಸ್ವಚ್ಛತಾ ಕಾರ್ಯ ನಡೆಸುತ್ತಿರುವ ಸಿಬ್ಬಂದಿಗಳು

ಬೆಂಗಳೂರು: ವಿಧಾನಮಂಡಲ ಅಧಿವೇಶನವು ಸೆ.21ರಿಂದ ಪ್ರಾರಂಭವಾಗುತ್ತಿದೆ. ಈ ಹಿನ್ನೆಲೆಯಲ್ಲಿ ವಿಧಾನಮಂಡಲದ ಉಭಯ ಸದನಗಳ ಪ್ರವೇಶಕ್ಕೆ ಕೊರೋನಾ ನೆಗೆಟಿವ್ ವರದಿ ಕಡ್ಡಾಯವಾಗಿದೆ.

ಪರಿಷತ್ ಸಭಾಂಗಣಕ್ಕೆ ಪ್ರವೇಶಿಸುವ ಪ್ರತಿಯೊಬ್ಬರೂ ಕಡ್ಡಾಯವಾಗಿ ಕೊರೋನಾ ಪರೀಕ್ಷೆ ಮಾಡಿಸಿಕೊಳ್ಳಬೇಕು. ಜೊತೆಗೆ ಕೊರೋನಾ ನಿಯಂತ್ರಣ ಕ್ರಮ ಪಾಲಿಸಬೇಕೆಂದು ವಿಧಾನಪರಿಷತ್ ಕಾರ್ಯದರ್ಶಿ ಕೆ.ಆರ್.ಮಹಾಲಕ್ಷ್ಮಿ ತಿಳಿಸಿದ್ದಾರೆ. 

ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಮಾರ್ಗಸೂಚಿಯಂತೆ ವಿಧಾನಪರಿಷತ್ ಆವರಣದಲ್ಲಿ ಕೊರೋನಾ ನಿಯಂತ್ರಣಕ್ಕೆ ಎಲ್ಲಾ ರೀತಿಯ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದೆ. 72 ಗಂಟೆಗಳೊಳಗಾಗಿ ಆರ್'ಟಿ-ಪಿಸಿಆರ್ ಕೊರೋನಾ ಪರೀಕ್ಷೆ ಮಾಡಿಸಿಕೊಂಡು ನೆಗೆಟಿವ್ ವರದಿ ಹೊಂದಿದ್ದರೆ ಮಾತ್ರವೇ ಸದನದಲ್ಲಿ ಭಾಗವಹಿಸಲು ಅವಕಾಶ ನೀಡಲಾಗುವುದು ಎಂದು ಸ್ಪಷ್ಟಪಡಿಸಿದರು. 

ಸದಸ್ಯರಿಂದ 1254 ಪ್ರಶ್ನೆಗಳನ್ನು ಸ್ವೀಕರಿಸಲಾಗಿದ್ದು, ನಿಯಮ 72ರ ಅಡಿ 34 ಸೂಚನೆಗಳುಹಾಗೂ ನಿಯಮ 330ರ ಅಡಿ 24 ಸೂಚನೆಗಳನ್ನು ಸ್ವೀಕರಿಸಲಾಗಿದೆ. ಕಳೆದ ಅಧಿವೇಶನದಲ್ಲಿ ವಿಧಾನಸಭೆಯಲ್ಲಿ ಅಂಗೀಕಾರಗೊಂಡ 9 ವಿಧೇಯಕಗಳು ವಿಧಾನಪರಿಷತ್ ನಲ್ಲಿ ಮಂಡನೆಯಾಗುವುದು ಬಾಕಿ ಇದೆ. ಈ ಪೈಕಿ ಎರಡು ವಿಧೇಯಕಗಳಿಗೆ ಸುಗ್ರೀವಾಜ್ಞೆ ಹೊರಡಿಸಿದ್ದು, ಉಳಿದ 7 ವಿಧೇಯಕ ಮಂಡನೆಯಾಗಲಿದೆ. ಸದಸ್ಯರ ಖಾಸಗಿ ಕಲಾಪಕ್ಕೂ ಅವಕಾಶವಿದೆ ಎಂದು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com